2ನೇ ದಿನ: 8 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

| Published : Apr 16 2024, 01:11 AM IST

2ನೇ ದಿನ: 8 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 2ನೇ ದಿನವಾದ ಸೋಮವಾರ 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ.

- ಬಿಜೆಪಿ ಗಾಯತ್ರಿ ಸಿದ್ದೇಶ್ವರ, ಕಾಂಗ್ರೆಸ್‌ ಡಾ.ಪ್ರಭಾ ಮಲ್ಲಿಕಾರ್ಜುನ ಇತರಿಂದ ಉಮೇದುವಾರಿಕೆ - ಮೊದಲ ದಿನವಾಗಿದ್ದ ಏ.12ರಂದು 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು

- ಒಟ್ಟು ಈವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆ: ಜಿಲ್ಲಾ ಚುನಾವಣಾಧಿಕಾರಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 2ನೇ ದಿನವಾದ ಸೋಮವಾರ 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಬಹುಜನ ಸಮಾಜವಾದಿ ಪಕ್ಷದಿಂದ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ಪಕ್ಷದಿಂದ ಕೆ.ಎಚ್. ರುದ್ರೇಶ, ಪಕ್ಷೇತರರಾಗಿ ಸುಭಾನ್ ಖಾನ್‌, ಟಿ.ಜಬೀನ್ ತಾಜ್‌, ಸಿ.ಎಂ. ಮಂಜುನಾಥ ಸ್ವಾಮಿ, ಕೆ.ಜಿ.ಅಜ್ಜಪ್ಪ ತಲಾ ಒಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾಗಿದ್ದ ಏ.12ರಂದು ಐವರು ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಎರಡನೇ ದಿನವಾದ ಸೋಮವಾರ 8 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆಯಾದವು. ಇದರಿಂದ ಈವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆ ಆದಂತಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.

ವಿ. ವೆಂಕಟೇಶ ತಿಳಿಸಿದ್ದಾರೆ.

- - - -(ಫೋಟೋ ಬರಲಿವೆ):