ಬೇಡಿಕೆ ಈಡೇರಿಕೆಗೆ ಆಗ್ರಹ: ಶಿಕ್ಷಕರಿಂದ ಶಾಸಕರಿಗೆ ಮನವಿ

| Published : Aug 12 2024, 01:03 AM IST

ಸಾರಾಂಶ

ಪುತ್ತೂರು ತಾಲೂಕು ಘಟಕದ ವತಿಯಿಂದ ಶನಿವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಪುತ್ತೂರು ತಾಲೂಕು ಘಟಕದ ವತಿಯಿಂದ ಶನಿವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ವತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಪುತ್ತೂರಿನ ಶಾಸಕರಿಗೆ ಮನವಿ ಸಲ್ಲಿಸಲಾಯಿತು.ಸಂಘದ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಜಿಲ್ಲಾ ಸಂಘದ ನಾಮ ನಿರ್ದೇಶಿತ ಉಪಾಧ್ಯಕ್ಷ ರಾಮಣ್ಣ ರೈ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್, ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ಶಾಂತಿ ಮೊರಾಸ್ ಹಾಗೂ ತಾಲೂಕಿನ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.