ಸಾರಾಂಶ
ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಪೌರಕಾರ್ಮಿಕರ ಹೋರಾಟಗಾರ ಸಿ.ಶಂಕರ ಅಂಕನಶೆಟ್ಟಿಪುರ ಅವರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಬೆಂಬಲ ನೀಡಲಿದೆ ಎಂದು ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ನಾರಾಯಣ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಪೌರಕಾರ್ಮಿಕರ ಹೋರಾಟಗಾರ ಸಿ.ಶಂಕರ ಅಂಕನಶೆಟ್ಟಿಪುರ ಅವರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಬೆಂಬಲ ನೀಡಲಿದೆ ಎಂದು ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ನಾರಾಯಣ್ ತಿಳಿಸಿದರು.ನಗರದ ಜಿಲ್ಲಾಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಪೌರಕಾರ್ಮಿಕರಿದ್ದು, ಸಿ.ಶಂಕರ ಅಂಕನಶೆಟ್ಟಿಪುರ ಕೂಡ ಪರಿಶಿಷ್ಠ ಜಾತಿಯ ಆದಿ ದ್ರಾವಿಡ ಸಮಾಜಕ್ಕೆ ಸೇರಿದವರಾಗಿದ್ದು, ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಪೌರಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಅವರಿಗೆ ಪೌರಕಾರ್ಮಿಕರು ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದರು.
ಜಿಲ್ಲಾ ಕೇಂದ್ರದಲ್ಲಿ ಪೌರಕಾರ್ಮಿಕ ಭವನ ನಿರ್ಮಾಣ, ಸಫಾಯಿ ಕರ್ಮಚಾರಿಗಳ ಮಕ್ಕಳ ವಿದ್ಯಾರ್ಥಿನಿಲಯಕ್ಕೆ 2 ಎಕರೆ ಜಮೀನು, ಪೌರಕಾರ್ಮಿಕರ ಬಡಾವಣೆಗೆ 2 ಎಕರೆ ಜಮೀನು, ಪೌರಕಾರ್ಮಿಕರ ಸ್ಮಶಾನಕ್ಕೆ 14 ಗುಂಟೆ ಜಮೀನು ಮಂಜೂರು ಮಾಡಿಸುವ ಮೂಲಕ ಪೌರಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಹನೂರಿನ ಪೌರಕಾರ್ಮಿಕರ ಕಾಲೋನಿಗಳಿಗೆ ಕುಡಿಯುವ ನೀರಿನ ತೊಂಬೆ, ಯಳಂದೂರು, ತೆರಕಣಾಂಬಿಯಲ್ಲಿ ಪೌರಕಾರ್ಮಿಕರ ಮನೆಗಳಿಗೆ ಹಕ್ಕುಪತ್ರ ವಿತರಣೆ ಮಾಡಿಸಿದ್ದಾರೆ. ಆದ್ದರಿಂದ ಈ ಬಾರಿ ಸಿ.ಶಂಕರ ಅಂಕನಶೆಟ್ಟಿಪುರ ಅವರನ್ನು ಬೆಂಬಲಿಸಿ ಗೆಲ್ಲಿಸಿ ಸಂಸತ್ ಭವನಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿದರು.