ಸಾರಾಂಶ
ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾದ ನವೀನ್, ಕೃಷ್ಣಪ್ಪ, ಶಶಿಧರ್, ಶಿವಪ್ರಸಾದ ನಾಯಕ್ ನಾಮಪತ್ರ ಸಲ್ಲಿಸಿದರು. ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಶಿಕ್ಷಕರ ಸಂಘದ ನಿರ್ದೇಶಕರು ಸೇರಿದಂತೆ ಸುಮಾರು 200 ಜನ ಶಿಕ್ಷಕರೊಂದಿಗೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಇರುವ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಸರ್ಕಾರಿ ನೌಕರರ ಚುನಾವಣೆ ಪ್ರಕ್ರಿಯೆ ಈಗಾಗಲೇ ಪ್ರಾರಂಭಗೊಂಡಿದೆ. ಶಿಕ್ಷಕರ ವಿಭಾಗದಲ್ಲಿ ಚುನಾವಣೆಯ ರಂಗು ಪ್ರಾರಂಭಗೊಂಡಿದೆ. ಬುಧವಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾದ ನವೀನ್, ಕೃಷ್ಣಪ್ಪ, ಶಶಿಧರ್, ಶಿವಪ್ರಸಾದ ನಾಯಕ್ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮುನ್ನ ರೈಲು ನಿಲ್ದಾಣ ರಸ್ತೆಯಲ್ಲಿನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಶಿಕ್ಷಕರ ಸಂಘದ ನಿರ್ದೇಶಕರು ಸೇರಿದಂತೆ ಸುಮಾರು 200 ಜನ ಶಿಕ್ಷಕರೊಂದಿಗೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಇರುವ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತಮ್ಮ ಬೆಂಬಲ ಸೂಚಿಸಿ ಶುಭ ಕೋರಿದರು,
ಶಿಕ್ಷಣ ಇಲಾಖೆಯಲ್ಲಿ ಹೆಚ್ಚು ಮತಗಳಿದ್ದು, ನಾಲ್ಕು ಸ್ಥಾನಗಳನ್ನು ಹೊಂದಿದೆ. ಶಿಕ್ಷಣ ಇಲಾಖೆಯ ಬೋಧಕೇತರ ವಿಭಾಗದಿಂದ ಬಿಇಒ ಕಚೇರಿ ಪ್ರಸನ್ನ ನಾಮಪತ್ರ ಸಲ್ಲಿಸಿದರು. ಆರೋಗ್ಯ ಇಲಾಖೆ ವಿಭಾಗದಿಂದ ತಾಲೂಕು ಆರೋಗ್ಯ ಅಧಿಕಾರಿ ತಿಮ್ಮರಾಜು ನಾಮಪತ್ರ ಸಲ್ಲಿಸಿದರು. ಇದೇ ಮೊದಲ ಬಾರಿ ಪದವಿ ಕಾಲೇಜುಗಳಿಗೆ ಒಂದು ಸ್ಥಾನದ ಅವಕಾಶ ಸಿಕ್ಕಿದ್ದು, ಬಾಣಾವರ ಪದವಿ ಕಾಲೇಜು ಪ್ರಾಧ್ಯಾಪಕ ಕೃಷ್ಣಮೂರ್ತಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಭೂಮಾಪನ ಇಲಾಖೆಯಿಂದ ಹಾಲಿ ಸಂಘದ ಗೌರವ ಅಧ್ಯಕ್ಷ ಶೇಖರಪ್ಪ ನಾಮಪತ್ರ ಸಲ್ಲಿಸಿದ್ದಾರೆ.