ಕೃಷ್ಣ ಬೈರೇಗೌಡಗೆ ವಿವಿಧ ಮನವಿ ಸಲ್ಲಿಕೆ

| Published : Aug 06 2024, 12:32 AM IST

ಸಾರಾಂಶ

ಬಾಳೆಹೊನ್ನೂರು: ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಸೋಮವಾರ ವಿವಿಧ ಬೇಡಿಕೆ ಈಡೆರಿಕೆಗೆ ಮನವಿ ಸಲ್ಲಿಸಿದರು.

ಬಾಳೆಹೊನ್ನೂರು: ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಸೋಮವಾರ ವಿವಿಧ ಬೇಡಿಕೆ ಈಡೆರಿಕೆಗೆ ಮನವಿ ಸಲ್ಲಿಸಿದರು.

ಚಿಕ್ಕಮಗಳೂರಿನಿಂದ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಪಟ್ಟಣದ ಜೇಸಿ ವೃತ್ತದ ಬಳಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ವಿವಿಧ ಮನವಿಗಳನ್ನು ಸಲ್ಲಿಸಿದ ಸಾರ್ವಜನಿಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.ಶಾಸಕ ಟಿ.ಡಿ.ರಾಜೇಗೌಡ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ತಾಲೂಕು ಕಾಂಗ್ರೆಸ್ ವಕ್ತಾರ ಹಿರಿಯಣ್ಣ, ಬಗರ್‌ಹುಕುಂ ಸಮಿತಿ ಸದಸ್ಯೆ ಹೇಮಲತಾ, ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ, ಸದಸ್ಯರಾದ ಬಿ.ಕೆ.ಮಧುಸೂದನ್, ರವಿಚಂದ್ರ, ಇಬ್ರಾಹಿಂ ಶಾಫಿ, ಶಶಿಕಲಾ ಮತ್ತಿತರರು ಹಾಜರಿದ್ದರು.೦೫ಬಿಹೆಚ್‌ಆರ್ ೧: ಬಾಳೆಹೊನ್ನೂರಿನ ಜೇಸಿ ವೃತ್ತದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ವಿವಿಧ ಮನವಿ ಸಲ್ಲಿಸಿದರು. ಶಾಸಕ ರಾಜೇಗೌಡ, ಹಿರಿಯಣ್ಣ, ಹೇಮಲತಾ, ಮಧುಸೂದನ್, ಸದಾಶಿವ ಇದ್ದರು.