ದೇವನಹಳ್ಳಿ: ಸೆ.೫ರಂದು ತಾಲೂಕಿನ ವಿಜಯಪುರದಲ್ಲಿ ಮೊದಲ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಿದ್ದು ಸಾರ್ವಜನಿಕರು ಕುಂದು ಕೊರತೆಗಳ ಅಹವಾಲು ಸಲ್ಲಿಸಿ ಸಮಸ್ಯೆ ಬಗೆಹರಿಸಿಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ ತಿಳಿಸಿದರು
ದೇವನಹಳ್ಳಿ: ಸೆ.೫ರಂದು ತಾಲೂಕಿನ ವಿಜಯಪುರದಲ್ಲಿ ಮೊದಲ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಿದ್ದು ಸಾರ್ವಜನಿಕರು ಕುಂದು ಕೊರತೆಗಳ ಅಹವಾಲು ಸಲ್ಲಿಸಿ ಸಮಸ್ಯೆ ಬಗೆಹರಿಸಿಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ ತಿಳಿಸಿದರು.
ಪ್ರಜಾಸೇವಾ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ, ಪ್ರತಿ ಶನಿವಾರ ಪ್ರತಿ ತಾಲೂಕಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಆಂದೋಲನ ಆಯೋಜಿಸುತ್ತಿದೆ. ಜೊತೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದಲ್ಲಿ ನಡೆಸಲಾಗುವುದು. ಸಾರ್ವಜನಿಕರು ಅರ್ಜಿ ನಮೂನೆ ಭರ್ತಿ ಮಾಡಿ ಆಯಾ ಕೌಂಟರ್‌ಗಳಲ್ಲಿ ನೀಡಬೇಕು. ಸ್ಥಳದಲ್ಲಿ ಪರಿಹರಿಸುವ ಅಹವಾಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಪರಿಹರಿಸಲಾಗುವುದು, ಉಳಿದ ಅರ್ಜಿಗಳನ್ನು ಸ್ವೀಕರಿಸಿ, ಸ್ವೀಕೃತಿ ಕಾಪಿ ಅರ್ಜಿದಾರರಿಗೆ ನೀಡಲಾಗುವುದು. ಪಿಂಚಣಿ, ಸಂಧ್ಯಾ ಸುರಕ್ಷಾ, ವಿಧವಾ, ವಿಶೇಷ ಚೇತನರ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಸೌಲಭ್ಯ, ಹೊಸ ಪಡಿತರ ಚೀಟಿ, ರಸ್ತೆ, ಕುಡಿಯುವ ನೀರು, ಸರ್ಕಾರಿ ಶಾಲೆ ಹಾಗೂ ಅಂಗನವಾಡಿ, ಪೊಲೀಸ್ ಇಲಾಖೆ, ನೀರಾವರಿ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳು ಹಾಗೂ ಸಮಸ್ಯೆಗಳಿಗೆ ಜಿಲ್ಲಾಡಳಿತ, ಜಿಪಂ ಹಾಗೂ ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ ಜಿಪಂ ಸಿಇಒ ಡಾ.ವಾಸಂತಿ ಅಮರ್, ಎಸಿ ಮಂಜುನಾಥ್, ಸಿಪಿಒ ರಾಮಕೃಷ್ಣ, ದೇವನಹಳ್ಳಿ ಇಒ ಮುನಿರಾಜು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
03 ದೇವನಹಳ್ಳಿ ಚಿತ್ರಸುದ್ದಿ: 01ದೇವನಹಳ್ಳಿ ತಾಪಂ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.