ಸಾರಾಂಶ
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರ ಮಾಡಿಕೊಂಡು ಕನಕನಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರ ಮಾಡಿಕೊಂಡು ಕನಕನಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.ಈ ಸಂದರ್ಭ ಮಾತನಾಡಿದ ಪುತ್ತಿಗೆ ಶ್ರೀಗಳು, ಬುಧವಾರ ಶ್ರೀ ವೇದವ್ಯಾಸ ಪ್ರತಿಷ್ಠಾಪನೆಯ ದಿನದಂದು ಶ್ರೀ ವ್ಯಾಸಮುಷ್ಟಿಯ ಆರಾಧಕರಾದ ಶ್ರೀ ಸುಬ್ರಹ್ಮಣ್ಯ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮುಖ್ಯ ಪ್ರಾಣ ದೇವರ ದರ್ಶನಕ್ಕೆ ಆಗಮಿಸಿರುವುದು ನಮಗೆ ಸಂತಸ ತಂದಿದೆ ಎಂದರು.ಉಡುಪಿ ಪರಿಸರದಲ್ಲಿ ಸುಬ್ರಹ್ಮಣ್ಯ ಮಠ ನಿರ್ಮಾಣ ಮಾಡುತ್ತಿರುವ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ನರಸಿಂಹದೇವರ ವ್ಯಾಸಮುಷ್ಟಿಯ ಪೂಜೆಯನ್ನು ಶ್ರೀ ಕೃಷ್ಣ ಮಠದಲ್ಲಿ ನಡೆಸಬೇಕು ಎಂದು ಶ್ರೀಗಳು ಆಹ್ವಾನಿಸಿದರು.ಪುತ್ತಿಗೆ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಭಕ್ತಾಭಿಮಾನಿಗಳು ಮತ್ತು ವಿದ್ವಾಂಸರ ಉಪಸ್ಥಿತಿಯಲ್ಲಿ ಪೂಜ್ಯ ಶ್ರೀಪಾದರನ್ನು ಸಾಂಪ್ರದಾಯಿಕವಾಗಿ ಕೃಷ್ಣಮಠಕ್ಕೆ ಸ್ವಾಗತಿಸಲಾಯಿತು.