ರಾಷ್ಟ್ರೀಯ, ಅಂತಾರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟುಗಳಿಗೆ ಸಹಾಯಧನ

| Published : Sep 11 2024, 01:14 AM IST

ಸಾರಾಂಶ

2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸರ್ಕಾರದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228985ನ್ನು ಸಂಪರ್ಕಿಸಲು ಕೋರಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸರ್ಕಾರದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಸೆ.20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228985ನ್ನು ಸಂಪರ್ಕಿಸಲು ಕೋರಿದೆ.

2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟೀಯ/ ರಾಷ್ಟೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಮಾರ್ಗಸೂಚಿಗಳು ಇಂತಿದೆ.

ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಜಾತಿಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು (ಆರ್.ಡಿ.ನಂಬರ್ ಇರುವ ಜಾತಿ ಪ್ರಮಾಣ ಪತ್ರ). ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75 ರಷ್ಟು ರು.15 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25 ರಷ್ಟು ವೆಚ್ಚವನ್ನು ಸ್ವಯಂ ಭರಿಸುವ ಷರತ್ತಿಗೆ ಬದ್ಧರಾಗಿರಬೇಕು. ಕ್ರೀಡಾಪಟುಗಳು ಅಂತಾರಾಷ್ಟೀಯ/ ರಾಷ್ಟೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು. ಜಿಮ್ ಸಲಕರಣೆಗಳನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುವುದು.

ಕ್ರೀಡಾಪಟುಗಳು ಕರ್ನಾಟಕದ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ. ಕ್ರೀಡಾಪಟುಗಳು ಸ್ವಯಂ ದೃಢೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರ ಮೂಲಕ ಸಲ್ಲಿಸತಕ್ಕದ್ದು.

ಕ್ರೀಡಾಪಟುವಿನ ಹೆಸರು ಹಾಗೂ ಭಾವಚಿತ್ರವುಳ್ಳ ಪಡಿತರ ಚೀಟಿ, ಮತದಾರರ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸುವುದು. ಅಂತಾರಾಷ್ಟೀಯ ಸಂಸ್ಥೆ ಮತ್ತು ಇತರೆ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್‌ಗಳಲ್ಲಿ ಪದಕ ವಿಜೇತರಾದವರನ್ನು ಪರಿಗಣಿಸಲಾಗುವುದು (ಮಾನ್ಯತೆ ಪಡೆಯದೇ ಇರುವ ಫೇಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅರ್ಹರಿರುವುದಿಲ್ಲ). ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಜಿಮ್ ಸ್ಥಾಪನೆಗೆ ಅರ್ಹರಿರುವುದಿಲ್ಲ. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.(ಹೆಸರು, ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಕೋಡ್ ಇರುವ ಪುಟ).

ಜಿಮ್ ಸ್ಥಾಪಿಸಲು ಅರ್ಜಿ ಸಲ್ಲಿಸಲು ಕ್ರೀಡಾಪಟುಗಳು ಜಿಮ್ ಸ್ಥಾಪಿಸಲು ಸೂಕ್ತ ಸ್ಥಳಾವಕಾಶ ಹಾಗೂ ಕಟ್ಟಡದ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವುದು. ಸಂಪೂರ್ಣ ದಾಖಲೆಗಳು ಇಲ್ಲದಿದ್ದಲ್ಲಿ ಅರ್ಜಿ ಪರಿಗಣಿಸಲಾಗುವುದಿಲ್ಲ. ಜಿಮ್ ಸಲಕರಣೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಮಾನವ ಸಂಪನ್ಮೂಲ ಹೊಂದಿರತಕ್ಕದ್ದು. ಅರ್ಜಿದಾರರು ಸ್ಥಳೀಯವಾಗಿ ಯಾವುದೇ ಅಪರಾಧ ಹಿನ್ನೆಲೆ ಉಳ್ಳವರಾಗಿರದ ಬಗ್ಗೆ ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಕ್ರೀಡಾಪಟುಗಳ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕಕ್ಕೆ 40 ವರ್ಷ ಮೀರಿರಬಾರದು. ಇಲಾಖೆಯ ಅಧಿಕಾರಿಗಳು ಪರಿಶೀಲನೆಗೆ ಬಂದ ಸಂದರ್ಭದಲ್ಲಿ ಸಂಪೂರ್ಣ ವರದಿ ನೀಡಿ ಸಹಕರಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.