ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನನಲ್ಲಿ ಕಳಪೆ ಆಹಾರ ವಿತರಿಸಲಾಗುತ್ತದೆ ಎಂದು ಸೆ.4 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡ ವಿಶೇಷ ವರದಿಗೆ ಸಿಎಂ ಕಚೇರಿ ಸ್ಪಂದಿಸಿದೆ. ಕಳಪೆ ಆಹಾರ ಪೂರೈಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಶಿಫಾರಸು ಮಾಡಿದ್ದಾರಲ್ಲದೆ, ಇಂದಿರಾ ಕ್ಯಾಂಟೀನ್‌ಗೆ ಬರುವ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರು, ಸ್ವಚ್ಛತೆ ಜೊತೆಗೆ ಸರ್ಕಾರದ ಮಾರ್ಗಸೂಚಿಗಳ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಹುಣಸಗಿ (ಯಾದಗಿರಿ ಜಿಲ್ಲೆ)
ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನನಲ್ಲಿ ಕಳಪೆ ಆಹಾರ ವಿತರಿಸಲಾಗುತ್ತದೆ ಎಂದು ಸೆ.4 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡ ವಿಶೇಷ ವರದಿಗೆ ಸಿಎಂ ಕಚೇರಿ ಸ್ಪಂದಿಸಿದೆ. ಕಳಪೆ ಆಹಾರ ಪೂರೈಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಶಿಫಾರಸು ಮಾಡಿದ್ದಾರಲ್ಲದೆ, ಇಂದಿರಾ ಕ್ಯಾಂಟೀನ್‌ಗೆ ಬರುವ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರು, ಸ್ವಚ್ಛತೆ ಜೊತೆಗೆ ಸರ್ಕಾರದ ಮಾರ್ಗಸೂಚಿಗಳ ಪಾಲಿಸಬೇಕು ಎಂದು ಸೂಚಿಸಲಾಗಿದೆ.ಕನ್ನಡಪ್ರಭದಲ್ಲಿ ಸೆ.4 ರಂದು ಪ್ರಕಟಗೊಂಡ ವರದಿಗೆ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು, ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಪ್ರತಿ ರವಾನಿಸಲಾಗಿತ್ತು.
ಸೆ.4 ರಂದು ವರದಿ ಪ್ರಕಟಗೊಂಡ ದಿನವೇ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣಕುಮಾರ ಕ್ಯಾಂಟೀನ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಇಂದಿರಾ ಕ್ಯಾಂಟೀನ್‌ಗೆ ಬರುವ ಸಾರ್ವಜನಿಕರಿಗೆ ಉತ್ತಮವಾದ ಗುಣಮಟ್ಟದ ಆಹಾರ, ಕುಡಿಯುವ ನೀರು, ಸ್ವಚ್ಛತೆ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸೂಚಿಸಿ ಸದರಿ ಪ್ರಕರಣ ಕುರಿತು 24 ಗಂಟೆಗಳ ಒಳಗಾಗಿ ಪಟ್ಟಣ ಪಂಚಾಯತ್ ಕಚೇರಿಗೆ ಲಿಖಿತವಾಗಿ ವರದಿ ಸಲ್ಲಿಸಲು ಗುತ್ತಿಗೆದಾರರಿಗೆ ಸೂಚಿಸಿದ್ದರಲ್ಲದೆ, ತಪ್ಪಿದ್ದಲ್ಲಿ ತಮ್ಮ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸು ಮಾಡಲಾಗುವುದು ಎಂದು ನೋಟಿಸ್ ಮೂಲಕ ಸೂಚಿಸಿದ್ದರು. ದಿನನಿತ್ಯದ ಆಹಾರ ಮೆನು ಅಳವಡಿಸುವುದು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು, ಇನ್ನು ಮುಂದೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಹಳೆಯ ತಹಸೀಲ್ದಾರ್ ಕಚೇರಿಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ ಪೂರೈಸಲಾಗುತ್ತಿದೆಯೇ? ಹಿಂದಿನ ರಾತ್ರಿಯ ಅನ್ನವನ್ನು ಬಿಸಿ ಮಾಡಿ, ಹಳಸಿದ ಸಾಂಬಾರು ಜೊತೆಗೆ ಬಡವರಿಗೆ ನೀಡಲಾಗುತ್ತಿದೆಯೇ? ಇಂತಹ ಆರೋಪಗಳು ಇದೀಗ ಸಾರ್ವಜನಿಕರ ವಲಯದಿಂದ ಕೇಳಿ ಬರುತ್ತಿವೆ. ಅಂದು ಗುರುವಾರ ಮಧ್ಯಾಹ್ನ ಆಹಾರ ಸೇವಿಸಿದ ನಾಗರಿಕರು ಕ್ಯಾಂಟೀನ್ ಅಡುಗೆ ಭಟ್ಟರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಂಬುದಾಗಿ ಸೆ.4.ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು.
ಇಂದಿರಾ ಕ್ಯಾಂಟೀನ್‌ಗೆ ಪ್ರತಿದಿನ ಭೇಟಿ ನೀಡಿ, ಗುಣಮಟ್ಟದ ಪರಿಶೀಲನೆ ಮಾಡಲು ಪಟ್ಟಣ ಪಂಚಾಯತ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಸಿ.ಎಂ. ಅವರ ವಿಶೇಷ ಕರ್ತವ್ಯ ಅಧಿಕಾರಿ ಡಾ. ಕೆ ವೈಷ್ಣವಿ ಅವರಿಗೆ ಬರೆದ ಪತ್ರದಲ್ಲಿ ಪ.ಪಂ ಮುಖ್ಯಾಧಿಕಾರಿ ಉಲ್ಲೇಖಿಸಿದ್ದಾರೆ.-
19ವೈಡಿಆರ್1ಎ : ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ವೈಷ್ಣವಿ ಅವರ ಪತ್ರ.19ವೈಡಿಆರ್2 : ಕನ್ನಡಪ್ರಭದಲ್ಲಿ ಸೆ.4 ರಂದು ಪ್ರಕಟಗೊಂಡಿದ್ದ ವರದಿ.
19ವೈಡಿಆರ್3 : ಕನ್ನಡಪ್ರಭದಲ್ಲಿ ಸೆ.5 ರಂದು ಪ್ರಕಟಗೊಂಡ ಫಾಲೋ ಅಪ್ ವರದಿ.