ಸಾರಾಂಶ
ಅಂಬಲಪಾಡಿ ಶ್ರೀ ನಾರಾಯಣಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಮತ್ತು ಬ್ರಹ್ಮಶ್ರೀ ನಾರಾಯಣಗುರು ವೇದಿಕೆ ಲೋಕಾರ್ಪಣೆಗೊಂಡಿತು. ಸಂಘದ ಸದಸ್ಯರು, ಮಹಿಳಾ ಘಟಕ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.
ಕನ್ನಡಪ್ರಭ ವಾರ್ತೆ ಉಡುಪಿ
ನವವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯಗಳ ಯಶಸ್ಸು ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.ಅವರು ಅಂಬಲಪಾಡಿ ಶ್ರೀ ನಾರಾಯಣಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಮತ್ತು ಬ್ರಹ್ಮಶ್ರೀ ನಾರಾಯಣಗುರು ವೇದಿಕೆಯ ಲೋಕಾರ್ಪಣೆಗೈದು ಮಾತನಾಡಿದರು.
ಈ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ಪಠೇಲರ ಮನೆ ಎ. ಜಯಕರ ಶೆಟ್ಟಿ ಅಂಬಲಪಾಡಿ ಅವರಿಗೆ ‘ಶಿಕ್ಷಕ ರತ್ನ’, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಂಗಾಧರ್ ಕಿದಿಯೂರು ಅವರಿಗೆ ‘ಸಾಹಿತ್ಯ ರತ್ನ’ ಮತ್ತು ಖ್ಯಾತ ಸಮಾಜ ಸೇವಕ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಅವರಿಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿಯನ್ನಿತ್ತು ಧರ್ಮದರ್ಶಿಗಳು ಸನ್ಮಾನಿಸಿದರು.ಸಂಘ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ ಶುಭಹಾರೈಸಿದರು. ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋದಾವರಿ ಎಂ. ಸುವರ್ಣ, ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ ಉಪಸ್ಥಿತರಿದ್ದರು.
ಸಂಘದ ಸದಸ್ಯರು, ಮಹಿಳಾ ಘಟಕ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.