ಸಾರಾಂಶ
ಕಾಶಿ ಮಠದ ವಾರಣಾಸಿ ಅಧೀನ ಸಂಸ್ಥೆಯಿಂದ ಗುರುಪೂರ್ಣಿಮೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನ, ಗುರುಗಳು ಜೀವನದ ಕತ್ತಲನ್ನು ದೂರ ಮಾಡಿ ಬೆಳಕಿನೆಡೆಗೆ ಸಾಗಲು ಉತ್ತಮ ಮಾರ್ಗದರ್ಶನ ನೀಡುತ್ತಾರೆ ಎಂದು ಶಾರದ ಪೈ ಕಲ್ಯಾಣ ಮಂಟಪದ ಟ್ರಸ್ಟ್‌ನ ಅಧ್ಯಕ್ಷ ಜಯಂತ್ ಪೈ ಹೇಳಿದರು. ಶಾರದ ಪೈ ಕಲ್ಯಾಣ ಮಂಟಪದಲ್ಲಿ ಕಾಶಿ ಮಠದ ವಾರಣಾಸಿ ಅಧೀನ ಸಂಸ್ಥೆಯಿಂದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಅವರು, ಗುರುವನ್ನು ಅರಿವಿನ ಸಾಗರ ಎಂದು ಕರೆಯುತ್ತಾರೆ ಸರ್ವರ ಹಿತ ಬಯಸುವ ಗುರುಗಳನ್ನು ಭಕ್ತಿ ಕೃತಜ್ಞತೆಯಿಂದ ಸ್ಮರಿಸಿ ಪೂಜಿಸುವ ಕಾರ್ಯಕ್ರಮವೇ ಗುರುಪೂರ್ಣಿಮೆ ಎಂದರು.ವಿದ್ಯಾರ್ಥಿಗಳು ಗುರುಗಳ ಮತ್ತು ಪೋಷಕರ ಮಾರ್ಗದರ್ಶನದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಉನ್ನತ ವ್ಯಾಸಂಗ ಮಾಡಿ ಸಮಾಜ ಸೇವೆ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿ ಸಾರ್ಥಕ ಬದುಕನ್ನು ನಿಮ್ಮದಾಗಿಸಿಕೊಳ್ಳಬೇಕು ಎಂದು ಹೇಳಿದರು.ಪ್ರತಿ ವರ್ಷ ಗುರುಪೂರ್ಣಿಮೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಮಾಡುವ ಜತೆಗೆ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ವ್ಯವಸ್ಥಾಪಕ ಲಕ್ಷ್ಮಣ್ ಕಾಮತ್ ಉಪಸ್ಥಿತರಿದ್ದರು. ಗುರುಪೂರ್ಣಿಮೆ ಕಾರ್ಯಕ್ರಮದ ಬಗ್ಗೆ ನಾರಾಯಣ ಮಲ್ಯ ಮಾತನಾಡಿದರು. ಅರ್ಚಕ ಕೃಷ್ಣಭಟ್ ನೇತೃತ್ವದಲ್ಲಿ ಗಣಪತಿ ಹೋಮ, ಪೂರ್ಣಾಹುತಿ, ಸತ್ಯನಾರಾಯಣ ವ್ರತ ಮತ್ತು ಕಥಾಶ್ರವಣ ನಡೆದ ಬಳಿಕ ಗುರು ಪೂಜೆ, ಪಾದುಕ ಪೂಜೆ, ಗುರುಕಾಣಿಕೆಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗಿಸಿದರು.
21 ಕೆಸಿಕೆಎಂ 4ಚಿಕ್ಕಮಗಳೂರಿನ ಶಾರದ ಪೈ ಕಲ್ಯಾಣ ಮಂಟಪದಲ್ಲಿ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಜಯಂತ್ ಪೈ, ಲಕ್ಷ್ಮಣ್ ಕಾಮತ್, ನಾರಾಯಣಮಲ್ಯ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))