ಸ್ವಸಾಮರ್ಥ್ಯದ ಬಗ್ಗೆ ನಂಬಿಕೆ ಇರಿಸಿಕೊಂಡರೆ ಮಾತ್ರ ಯಶಸ್ಸು ಸುಲಭ ಸಾಧ್ಯ: ಡಾ. ಸತೀಶ್ ಶೆಟ್ಟಿ

| Published : Jan 16 2024, 01:48 AM IST

ಸ್ವಸಾಮರ್ಥ್ಯದ ಬಗ್ಗೆ ನಂಬಿಕೆ ಇರಿಸಿಕೊಂಡರೆ ಮಾತ್ರ ಯಶಸ್ಸು ಸುಲಭ ಸಾಧ್ಯ: ಡಾ. ಸತೀಶ್ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ಪೆರ್ವಾಜೆಯ ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಧ್ಯಾನ ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆ ನಡೆಯಿತು. ದಂತ ವೈದ್ಯ ಡಾ.ಸತೀಶ್ ಶೆಟ್ಟಿ ವಿವೇಕಾನಂದರ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯನ್ನು ಅರಿತುಕೊಂಡು ರಾಷ್ಟ್ರಪ್ರೇಮದೊಂದಿಗೆ ಪ್ರಭಾವಶಾಲಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ರಾಷ್ಟ್ರ ಪ್ರಬಲ ಮತ್ತು ಬಲಿಷ್ಠವಾಗಬೇಕಾದರೆ ನಮ್ಮ ಮನೆಯಿಂದ ನಮ್ಮಿಂದಲೇ ಮೊದಲ ಹೆಜ್ಜೆ ಆರಂಭವಾಗಬೇಕು. ಸ್ವ ಸಾಮರ್ಥ್ಯದ ಬಗ್ಗೆ ನಂಬಿಕೆ ಇರಿಸಿಕೊಂಡಾಗ ಮಾತ್ರ ಗುರಿ ತಲುಪಿ ಯಶಸ್ಸನ್ನು ಸಾಧಿಸಬಹುದು ಎಂದು ದಂತ ವೈದ್ಯ ಡಾ.ಸತೀಶ್ ಶೆಟ್ಟಿ ಹೇಳಿದ್ದಾರೆ.ಕಾರ್ಕಳ ಪೆರ್ವಾಜೆಯ ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಧ್ಯಾನ ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ ಸಮಾರಂಭದ ಮುಖ್ಯಅತಿಥಿಯಾಗಿ ಮಾತನಾಡಿದರು.

ಚಾರ್ಟರ್ಡ್ ಅಕೌಂಟೆಂಟ್ ಕಾರ್ಕಳ ಕಮಲಾಕ್ಷ ಕಾಮತ್ ಉದ್ಘಾಟಿಸಿದರು. ಲೇಖಕಿ, ಶಿಕ್ಷಕಿ ಪ್ರಜ್ವಲಾ ಶೆಣೈ ದಿಕ್ಸೂಚಿ ಭಾಷಣ ಮಾಡಿದರು.ಕಾರ್ಕಳ ಪುಲ್ಕೇರಿ ಶ್ರೀ ರಾಮಪ್ಪ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ, ಎಂಸಿಎಫ್‌ನ ಜಂಟಿ ಪ್ರಧಾನ ವ್ಯವಸ್ಥಾಪಕ ಕೆ.ಬಿ. ಕೀರ್ತನ್ ಕುಮಾರ್, ಹೊಸಸಂಜೆ ಬಳಗ ಅಧ್ಯಕ್ಷ ಆರ್. ದೇವರಾಯ ಪ್ರಭು, ಪರಂಪರಾ ವಿವಿಧೋದ್ದೇಶ ಸಹಕಾರಿ ಸಂಘ ಕಾರ್ಯನಿರ್ವಹಣಾಧಿಕಾರಿ ಗಂಗಾಧರ ಪಣಿಯೂರು, ಕಲಂಬಾಡಿಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವಾಗ್ಮಿ ಮನಸ್ವಿ ಕುಲಾಲ್, ಎಂಜಿನಿಯರ್ ಶಶಿಕಾಂತ್ ರೈ, ಉಡುಪಿ ಜಿಲ್ಲಾ ಬ್ರಾಹ್ಮಣರ ಸಂಘ ಅಧ್ಯಕ್ಷ ಸುಧಾಕರ ಭಟ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಮಂದಿರದ ಸಂಸ್ಥಾಪಕರಾದ ಶ್ರೀನಿವಾಸ ಜಿ.ಕೆ. ಪೈ ಮತ್ತು ನಿರ್ಮಲಾ ಪೈ ಉಪಸ್ಥಿತರಿದ್ದರು.

ಸಾತ್ವಿಕಾ ಮತ್ತು ರಚನಾ ಪ್ರಾರ್ಥಿಸಿದರು. ಧಾರಿಣಿ ಉಪಾಧ್ಯ ಕಾರ್ಯಕ್ರಮ ನಿರ್ವಹಿಸಿದರು. ವೀಣಾ ಭಂಡಾರಿ ವಂದಿಸಿದರು.