ಸಾರಾಂಶ
ಹೊಸಕೋಟೆ: ವಿದ್ಯಾರ್ಥಿಗಳು ಸ್ಪರ್ದಾತ್ಮಕ ಪರೀಕ್ಷೆಗಳಲ್ಲಿ ಯಶ್ವಸಿಯಾಗಬೇಕೆಂದರೆ ಕಠಿಣ ಪರಿಶ್ರಮ ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ.ರಮೇಶ್ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ ಸ್ನಾತಕೋತ್ತರ ವಿಭಾಗದಿಂದ 2025-26ನೇ ಸಾಲಿನ ಪ್ರಥಮ ಎಂ.ಎ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉಚಿತ ಪುಸ್ತಕ ವಿತರಣೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೊಸಕೋಟೆ: ವಿದ್ಯಾರ್ಥಿಗಳು ಸ್ಪರ್ದಾತ್ಮಕ ಪರೀಕ್ಷೆಗಳಲ್ಲಿ ಯಶ್ವಸಿಯಾಗಬೇಕೆಂದರೆ ಕಠಿಣ ಪರಿಶ್ರಮ ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ.ರಮೇಶ್
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ ಸ್ನಾತಕೋತ್ತರ ವಿಭಾಗದಿಂದ 2025-26ನೇ ಸಾಲಿನ ಪ್ರಥಮ ಎಂ.ಎ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉಚಿತ ಪುಸ್ತಕ ವಿತರಣೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.ಪದವಿ ಪಡೆದ ಎಲ್ಲರೂ ಸ್ಪರ್ಥಾತ್ಮಕ ಪರೀಕ್ಷೆ ತೆಗೆದುಕೊಳ್ಳುವುದಕ್ಕೆ ಅರ್ಹರು. ಅದಕ್ಕಾಗಿ ಯಶ್ವಸನ್ನು ಗಳಿಸಲು ಕಠಿಣ ಪರಿಶ್ರಮ ಪಡಬೇಕು. ಮೊಬೈಲ್ ಬಳಕೆ ಅದಷ್ಟು ಕಡಿಮೆ ಮಾಡಿ. ಹೆಚ್ಚು ಹೆಚ್ಚು ದಿನಪತ್ರಿಕೆ ಓದಬೇಕು. ಆಗ ಮಾತ್ರ ನಿಮ್ಮ ಗುರಿ ಮುಟ್ಟಲು ಸಾಧ್ಯವಿದೆ ಎಂದರು.
ಪ್ರಾಂಶುಪಾಲರಾದ ಪ್ರೊ.ರಾಮಲಿಂಗಪ್ಪ ಟಿ.ಬೇಗೂರು ಇವತ್ತಿನ ದಿನಗಳಲ್ಲಿ ಲೆಕ್ಕವಿಲ್ಲದಷ್ಟು ಪೈಪೋಟಿ ಇದೆ. 2025 ಸಾಲಿನಲ್ಲಿ 10ಲಕ್ಷದಷ್ಟು ಅಭ್ಯರ್ಥಿಗಳು ಸ್ಪರ್ದಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದಾರೆ. ಅದರಲ್ಲಿ 4000 ಅರ್ಭ್ಯಧಿಗಳು ಮಾತ್ರವೇ ಅಂತಿಮ ಪರೀಕ್ಷೆಯನ್ನು ಪಾಸು ಮಾಡಿದ್ದಾರೆ. ಅದರಲ್ಲಿ ಸಂದರ್ಶನ ಮುಗಿಸಿ ಕೆಲಸ ತೆಗೆದುಕೊಂಡರು ಸಾವಿರ ಜನ ಮಾತ್ರ. ಹಾಗಾಗಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಈರಣ್ಣ ವಿಭಾಗದ ಇತಿಹಾಸ ಕುರಿತಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಸಂಯೋಜರಾದ ಪ್ರೊ.ಕಾವಲಯ್ಯ, ಡಾ.ಶರಣಬಸಪ್ಪ, ಪ್ರೊ.ರಶ್ಮಿ ರಾವ್, ಪ್ರೊ.ವಿಶ್ವೇಶ್ವರಯ್ಯ, ಪ್ರೊ.ವೀರಭದ್ರಯ್ಯ ಉಪನ್ಯಾಸಕರಾದ ಶ್ರೀನಿವಾಸ್ ಆಚಾರ್, ಶ್ರೀನಿವಾಸಪ್ಪ, ದ್ಯಾವಪ್ಪ, ವೆಂಕಟೇಶ್, ರಘು ಎಚ್.ಎನ್ ಉಪಸ್ದಿತರಿದ್ದರು.ಫೋಟೋ: 13 ಹೆಚ್‌ಎಸ್‌ಕೆ 2
ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಸ್ನಾತಕೋತ್ತರ ವಿಭಾಗದಿಂದ 2025-26ನೇ ಸಾಲಿನ ಪ್ರಥಮ ಎಂಎ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ.ರಮೇಶ್ ಮಾತನಾಡಿದರು.;Resize=(128,128))
;Resize=(128,128))
;Resize=(128,128))
;Resize=(128,128))