ಕನ್ನಡಪ್ರಭ ವಾರ್ತೆ ಬೆಳಗಾವಿ ನಿರಂತರ ಅಧ್ಯಯನದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಶಾಸಕ ಆಸೀಫ್ (ರಾಜು) ಸೇಠ್ ಹೇಳಿದರು. ಇಲ್ಲಿನ ಸುಭಾಸ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ನಿರ್ಮಿಸಿದ ವಿಜನ್ ಬೆಳಗಾವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ನಿರಂತರ ಅಧ್ಯಯನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಪರೀಕ್ಷಾ ಕೇಂದ್ರ ನಿರ್ಮಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಿರಂತರ ಅಧ್ಯಯನದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಶಾಸಕ ಆಸೀಫ್ (ರಾಜು) ಸೇಠ್ ಹೇಳಿದರು.

ಇಲ್ಲಿನ ಸುಭಾಸ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ನಿರ್ಮಿಸಿದ ವಿಜನ್ ಬೆಳಗಾವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ನಿರಂತರ ಅಧ್ಯಯನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಪರೀಕ್ಷಾ ಕೇಂದ್ರ ನಿರ್ಮಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.ವಸತಿ ನಿಲಯದ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ನಿರ್ಮಿಸಿದರೇ ಅನುಕೂಲವಾಗುತ್ತದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ನನ್ನ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪರಿಶೀಲಿಸಿ ವಸತಿ ನಿಲಯದ ಆವರಣದಲ್ಲಿದ್ದ ಹಳೆಯ ಕಟ್ಟಡವನ್ನು ನವೀಕರಣಗೊಳಿಸಿ ಸ್ಪರ್ಧಾತ್ಮಕ ಕೇಂದ್ರವನ್ನಾಗಿ ಸಿದ್ಧಪಡಿಸಲಾಗಿದೆ. ಮುಂದೆ ಕ್ಷೇತ್ರದ ಇನ್ನಿತರ ಭಾಗಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ನಿರ್ಮಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ವಿದ್ಯಾರ್ಥಿನಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ಓದಲು ಪ್ರೇರೇಪಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಗ್ರಂಥಾಲಯದಲ್ಲಿ ಮೂರು ಕೊಠಡಿಗಳಿದ್ದು, ಕುರ್ಚಿ, ಟೇಬಲ್ ಹಾಗೂ ಓದಲು ವಿವಿಧ ಸ್ಪರ್ಧಾತ್ಮಕ ಪುಸ್ತಕಗಳು, ದಿಪತ್ರಿಕೆಗಳನ್ನು ಇರಿಸಲಾಗಿದೆ. ಇಲ್ಲಿನ ವಸತಿ ನಿಲಯದ ವಿದ್ಯಾರ್ಥಿನಿಯರ ಜೊತೆಗೆ ಬೇರೆ ವಸತಿ ನಿಲಯ ಅಥವಾ ಶಾಲಾ, ಕಾಲೇಜಿನ ವಿದ್ಯಾರ್ಥಿನಿಯರು ಕೂಡ ತಮ್ಮ ಗುರುತಿನ ಚೀಟಿಯೊಂದಿಗೆ ಇಲ್ಲಿಗೆ ಬಂದು ಅಧ್ಯಯನ ನಡೆಸಬಹುದಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಶ್ರವಣಕುಮಾರ ನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಹರ್ಷ.ಎಸ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚೇತನ ದರಿಗೌಡರ್, ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಶಾಂತಲಾ ಮರಿಗೌಡರ್, ನಿಲಯ ಪಾಲಕ ಕೆಂಪಣ್ಣ ಭಂಗಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.