ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಅಶೋಕ

| Published : Mar 21 2024, 01:00 AM IST

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಅಶೋಕ
Share this Article
  • FB
  • TW
  • Linkdin
  • Email

ಸಾರಾಂಶ

ಹುಣಸಗಿ ತಾಲೂಕಿನ ಅರಕೇರಿ (ಜೆ) ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಹುಣಸಗಿ

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ವಿದ್ಯಾಭ್ಯಾಸದ ಹಂತದಲ್ಲಿ ಮಕ್ಕಳು ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕ ಅಶೋಕ ರಾಜನಕೋಳೂರ ಹೇಳಿದರು.

ತಾಲೂಕಿನ ಅರಕೇರಿ (ಜೆ) ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಶಾಲೆಯಲ್ಲಿ 8ನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ ಶಿಕ್ಷಣ ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ ಪಡೆದು ತಾವು ಕಲಿತ ಶಾಲೆಗೆ ಹಾಗೂ ದೇಶಕ್ಕೆ ಕೀರ್ತಿ ತರುವ ಹೆಮ್ಮೆಯ ಮಕ್ಕಳಾಗಿ ಬೆಳೆಯಬೇಕು ಎಂದು ಹೇಳಿದರು.

ಶಾಲಾ ಮುಖ್ಯಸ್ಥ ಬಸವರಾಜ ಪಲಗಲದಿನ್ನಿ ಮಾತನಾಡಿ, ವಿದ್ಯಾರ್ಥಿಗಳು ಬುದ್ಧಿವಂತಿಕೆ ಹಾಗೂ ಕೌಶಲ್ಯ ಹೆಚ್ಚಿಸಿಕೊಂಡು ಜೀವನದ ಹಾದಿಯಲ್ಲಿ ಸಾಗಬೇಕು. ಇದರೊಂದಿಗೆ ಪೋಷಕರು ಹಾಗೂ ಗುರು ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು.

ವಿದ್ಯಾರ್ಥಿಗಳ ಬೆಳವಣಿಗೆಗೆ ಪೋಷಕರ ಹಾಗೂ ಗುರುಗಳ ಸಹಕಾರ ಸದಾ ಇರುತ್ತದೆ. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಹಾದೇವಿ ಪಲಗಲದಿನ್ನಿ ವಹಿಸಿದ್ದರು. ಭವಾನಿ ಸ್ವಾಗತಿಸಿದರು. ಸಿಂಚನಾ ನಿರುಪಿಸಿದರು. ಸುನೀತಾ ಬಡಗೇರ ವಂದಿಸಿದರು. ಶಿವಕುಮಾರ, ಪವಿತ್ರಾ, ಭಾಗ್ಯಶ್ರೀ, ಶಾಹಿನ್ ಸೇರಿದಂತೆ ಇತರರಿದ್ದರು.