ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಪ್ರಜೆಗಳಾಗಿ ದೇಶ, ಸಮಾಜಕ್ಕೆ ಕೊಡುಗೆ ನೀಡುವ ಮಹಾನ್ ಸಾಧಕರಾಗಿ ಹೊರಹೊಮ್ಮುವ ಮಹತ್ತರವಾದ ಗುರಿಯೊಂದಿಗೆ ಓದು, ಅಭ್ಯಾಸ ಮುಂದುವರೆಸಬೇಕು ಎಂದು ರವಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಜೆಡಿಎಸ್ ಹಿರಿಯ ಮುಖಂಡ ಡಾ. ಈ ಗೋಪಾಲಪ್ಪ ಕರೆ ನೀಡಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರವಿ ಪಿಯು ಕಾಲೇಜು ಹಾಗೂ ಪದವಿ ಕಾಲೇಜು ವಾರ್ಷಿಕೋತ್ಸವ ಹಾಗೂ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ಸಾಧನೆಗೆ ಗುರಿ ಇರಬೇಕು
ಟಿವಿ, ಮೊಬೈಲ್ ಗೀಳಿಗೆ ಒಳಗಾಗದಿರಿ, ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆ-ಕಾಲೇಜಿನಲ್ಲೂ ಮುಂದುವರೆಯಬೇಕು, ವಿದ್ಯೆಗಿಂತ ವ್ಯಕ್ತಿತ್ವ ಮುಖ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಗುರಿ ನಿಗದಿಪಡಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿ ಎಂದರು.ಸಮಯ ಪಾಲನೆ, ಶಿಸ್ತು ಮುಖ್ಯ
ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಹಾಗೂ ರವಿ ಶಿಕ್ಷಣ ಸಂಸ್ಥೆ ನಿರ್ದೇಶಕ ಜಿ.ನರೇಶ್ ಬಾಬು ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಸಮಯ ಪಾಲನೆ, ಆರ್ಥಿಕ ಶಿಸ್ತು, ಸಾಮಾಜಿಕ ಶಿಸ್ತು, ದೇಹಾರೋಗ್ಯ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಧನಾತ್ಮಕ ಚಿಂತನೆ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.ವಿದ್ಯಾರ್ಥಿಗಳಿಗೆ ಪುರಸ್ಕಾರರವಿ ಶಿಕ್ಷಣ ಸಂಸ್ಥೆ ನಿರ್ದೇಶಕಿ ಸುಷ್ಮಾ ನರೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ರವಿ ಬಿ.ಎಡ್ ಕಾಲೇಜು ಪ್ರಾಂಶುಪಾಲ ಮಂಜುನಾಥ್ ರೆಡ್ಡಿ, ರವಿ ಇಂಟರ್ ನ್ಯಾಷನಲ್ ಶಾಲೆ ಮುಖ್ಯ ಶಿಕ್ಷಕಿ ಭವಾನಿ ಎಚ್. ವಿ., ರವಿ ಪಿಯು ಕಾಲೇಜು ಹಾಗೂ ಪದವಿ ಕಾಲೇಜು ಪ್ರಾಂಶುಪಾಲ ಸಲೀಮ್ ಪಾಷ, ಲಿಯಾಖತ್ ವುಲ್ಲಾ ಖಾನ್, ಬಾಬಾ ಜಾನ್, ಸದಾಂಉಸೇನ್, ಮಹಮದ್ ಜಹೀರ್‌ಖಾನ್ ಇದ್ದರು.