ಸಾರಾಂಶ
ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಮಾತನಾಡಿ ಸತತ ಪರಿಶ್ರಮ ಪಟ್ಟಾಗ ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಂಗದಲ್ಲಿ ಸುರತ್ಕಲ್ ಬಂಟರ ಸಂಘವು ಪ್ರತಿಯೊಂದು ಪ್ರದೇಶದಲ್ಲೂ ಒಳ್ಳೆಯ ಸಾಧನೆ ಮಾಡಿದೆ. ಪುಣೆಯಲ್ಲಿ ಎಲ್ಲ ಸದಸ್ಯ ಕಲಾವಿದರು ಉತ್ತಮ ಪ್ರದರ್ಶನ ನೀಡುವಂತಾಗಲೆಂದು ಹಾರೈಸಿದರು.
ಕನ್ನಡಪ್ರಭವಾರ್ತೆ ಮೂಲ್ಕಿ
ನಮ್ಮ ಕಾರ್ಯದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಶಿಸ್ತು ಏಕಾಗ್ರತೆ ಛಲಗಳಿಂದ ಸಾಧಿಸಿದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್ ಮೆನ್ ಕರುಣಾಕರ ಎಂ. ಶೆಟ್ಟಿ ಮದ್ಯಗುತ್ತು ಹೇಳಿದರು.ಜನವರಿ 26 ರಂದು ನಡೆಯಲಿರುವ ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹೂರ್ತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಮಾತನಾಡಿ ಸತತ ಪರಿಶ್ರಮ ಪಟ್ಟಾಗ ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಂಗದಲ್ಲಿ ಸುರತ್ಕಲ್ ಬಂಟರ ಸಂಘವು ಪ್ರತಿಯೊಂದು ಪ್ರದೇಶದಲ್ಲೂ ಒಳ್ಳೆಯ ಸಾಧನೆ ಮಾಡಿದೆ. ಪುಣೆಯಲ್ಲಿ ಎಲ್ಲ ಸದಸ್ಯ ಕಲಾವಿದರು ಉತ್ತಮ ಪ್ರದರ್ಶನ ನೀಡುವಂತಾಗಲೆಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಿದ್ದು ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು, ನಿರ್ದೇಶಕಿ ರಾಜೇಶ್ವರಿ ಡಿ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಯರಾಮ್ ಶೆಟ್ಟಿ, ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ ಸುಜಾತಾ ಹರೀಶ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷ ಭವ್ಯಾ ಶೆಟ್ಟಿ, ಪ್ರವೀಣ್ ಶೆಟ್ಟಿ, ಕಿರಣ್ ಪ್ರಸಾದ್ ರೈ, ದಿವಾಕರ ಸಾಮಾನಿ ಚೇಳಾರ್, ದೇವೇಂದ್ರ ಶೆಟ್ಟಿ, ಮಾಧವ ಶೆಟ್ಟಿ ತಡಂಬೈಲ್, ರಮೇಶ್ ಶೆಟ್ಟಿ, ರಾಮಚಂದ್ರ ಶೆಟ್ಟಿ ತಡಂಬೈಲ್, ಅಕ್ಷಯ್ ಶೆಟ್ಟಿ, ಸುಕೇಶ್ ಶೆಟ್ಟಿ ಚೇಳಾರ್ ಮತ್ತಿತರರು ಉಪಸ್ಥಿತರಿದ್ದರು.