ಸಾರಾಂಶ
ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿಶಾಲಾ ಕಾಲೇಜಿಗೊಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಬೀದರ್
ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ನುಡಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿಯಿಂದ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ, ಕಾಲೇಜಿಗೊಂದು ಸಾಹಿತ್ಯ- ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿಗಳು ವ್ಯಾಸಂಗದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರ ಕಟ್ಟುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಡಾ. ಶ್ರೇಯಾ ಯಶಪಾಲ್ ಮಹಿಂದ್ರಕರ್ ಮಾತನಾಡಿ, ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಪರಿಷದ್ ಜಿಲ್ಲಾ ಸಮಿತಿ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ಧಿಷ್ಟ ಗುರಿ ಇಟ್ಟುಕೊಳ್ಳಬೇಕು. ಹಾಗಾದಲ್ಲಿ ಸಾಧನೆ ಸುಲಭವಾಗಲಿದೆ ಎಂದು ತಿಳಿಸಿದರು.ಶಾಲೆ ಮಕ್ಕಳಿಂದ ಕಥೆ ಹೇಳುವುದು, ಸರಸ್ವತಿ ಸ್ತುತಿ, ವಚನ ಗಾಯನ ಮೊದಲಾದ ಕಾರ್ಯಕ್ರಮ ನಡೆದವು. ವಿವಿಧ ಚಟುವಟಿಕೆಯಲ್ಲಿ ಪ್ರತಿಭೆ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶಾಲೆಯ ಪ್ರಾಚಾರ್ಯ ಶರಣಪ್ಪ ಬಿರಾದಾರ, ಪ್ರಮುಖರಾದ ರಾಮಕೃಷ್ಣನ್ ಸಾಳೆ, ಡಾ. ಜಗದೇವಿ ತಿಬಶೆಟ್ಟಿ, ಸೂರ್ಯಕಾಂತ ರಾಮಶೆಟ್ಟಿ ಉಪಸ್ಥಿತರಿದ್ದರು.