ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುನ್ನು ಅಳವಡಿಸಿಕೊಂಡು ನಿಮ್ಮ ಗಮ್ಯದ ಕಡೆಗೆ ಹೆಜ್ಜೆಹಾಕಿದಾಗ ಜೀವನದಲ್ಲಿ ಯಶಸ್ಸನ್ನು ಪಡೆಯಬಹುದು ಎಂದು ಸಾಹೇ ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕನ್ನಡಪ್ರಭ ವಾರ್ತೆ, ತುಮಕೂರುವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುನ್ನು ಅಳವಡಿಸಿಕೊಂಡು ನಿಮ್ಮ ಗಮ್ಯದ ಕಡೆಗೆ ಹೆಜ್ಜೆಹಾಕಿದಾಗ ಜೀವನದಲ್ಲಿ ಯಶಸ್ಸನ್ನು ಪಡೆಯಬಹುದು ಎಂದು ಸಾಹೇ ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಜಿಪಿ ನೆಕ್ಸಾಸ್ ನಲ್ಲಿ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗಾಗಿ 15 ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಂದೆ ತಾಯಿಗಳ ಆಶೋತ್ತರಗಳನ್ನು ಇಡೇರಿಸಿ ತಂದೆ ತಾಯಿಗಳ ನಂಬಿಕೆಯನ್ನು ಉಳಿಸಿಕೊಳ್ಳಿ. ಕೌಶಲ್ಯವನ್ನು ಹೆಚ್ಚಿಸಿಕೊಂಡು ಆತ್ಮ ವಿಶ್ವಾಸದಿಂದ ಸ್ವರ್ಧೆಗೆ ಇಳಿಯಿರಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಮಾತನಾಡಿ ಬ್ಲೂ ವೋಲ್ಟ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಬಹಳ ಅಗತ್ಯವಾಗಿದೆ. ನಾವು ಕಲಿತಿರುವ ಕೌಶಲ್ಯ ನಮ್ಮ ಜೀವನವನ್ನು ಉತ್ತಮ ಗೊಳಿಸುತ್ತದೆ. ಪ್ರತಿನಿತ್ಯ ಏನಾದರೊಂದನ್ನು ಕಲಿಯುವಂತಹ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲೂಓಲ್ಟ್ ಸಂಸ್ಥೆ ಎಸ್‌ಎಸ್‌ಐಟಿ ಕಾಲೇಜಿನ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ ವಿಭಾಗದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಐಟಿ ಕಾಲೇಜಿನ ಪಾಂಶುಪಾಲ ಡಾ. ಮಹಾಂತೇಶ್ ಎಂ. ನಡಕಟ್ಟಿ, ಡಾ. ವಿವೇಕ್ ವೀರಯ್ಯ, ಡಾ. ಎಸ್ ರೇಣುಕಲತಾ, ತ್ಯಾಗರಾಜು, ಡಾ. ಪ್ರವೀಣ್, ಡಾ. ಯೋಗಾನಂದ್, ಡಾ. ವೇಣುಗೋಪಾಲ್ ಚೌಹಾಣ್ , ಡಾ. ಹರೀಶ್ ಡಿಪ್ಲೊಮೊ ವಿದ್ಯಾರ್ಥಿಗಳು ಹಾಜರಿದ್ದರು.