ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಆಶೀರ್ವಾದಿಂದ ಇಂದು ಮಠದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟದ ಹುದ್ದೆ ಹಾಗೂ ಉದ್ಯಮಿಗಳಾಗಿದ್ದಾರೆ ಎಂದು ಶ್ರೀ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ನಂಜೇಗೌಡ ಅಭಿಪ್ರಾಯ ಪಟ್ಟರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಆಶೀರ್ವಾದಿಂದ ಇಂದು ಮಠದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟದ ಹುದ್ದೆ ಹಾಗೂ ಉದ್ಯಮಿಗಳಾಗಿದ್ದಾರೆ ಎಂದು ಶ್ರೀ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ನಂಜೇಗೌಡ ಅಭಿಪ್ರಾಯ ಪಟ್ಟರು. ಗುಬ್ಬಿ ತಾಲೂಕಿನ ಕಲ್ಲೂರು ಗ್ರಾಮದ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಳೇಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ನೇಹ ಸಮ್ಮೀಲನ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಗಳು ಬಡ ಮತ್ತು ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸ ಕ್ಕೆ ಅನುಕೂಲವಾಗುವ ದೃಷ್ಟಿ ಯಿಂದ ಶಾಲೆ ಪ್ರಾರಂಭ ಮಾಡಿದ ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಪುಟವಿಟ್ಟ ಚಿನ್ನದಂತ ಇದ್ದು ಇಂದು ದೇಶ ವಿದೇಶದಲ್ಲಿ ಉದ್ಯಮಿಗಳಾಗಿದ್ದಾರೆ. ಸರ್ಕಾರಿ ನೌಕರಿಯನ್ನು ಪಡೆದಿದ್ದಾರೆ ಇದು ನಮ್ಮ ಶಾಲೆಯ ಶಿಕ್ಷಕರಿಗೆ ಶಾಲೆಗೆ ಸಂದ ಗೌರವ ಎಂದರು.ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಉದ್ಯಮಿ ನಾಗರಾಜು ಮಾತನಾಡಿ, ನಾವು ವಿದ್ಯಾಭ್ಯಾಸ ಮಾಡಿ ಹಿಂದೂ ಉನ್ನತ ಮಟ್ಟಕ್ಕೆ ಬರಲು ಅವಕಾಶ ಕಲ್ಪಿಸಿದ ಶಾಲೆಯ ಅಭಿವೃದ್ಧಿಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಇಂದು ಕಾರ್ಯಕ್ರಮಕ್ಕೆ ಭಾಗವಹಿಸಿರುವುದು ಸಂತೋಷದ ಸಂಗತಿ ಈ ನಿಟ್ಟಿನಲ್ಲಿ ನಾವೆಲ್ಲರೂ ಶಾಲೆಯ ಅಭಿವೃದ್ಧಿಗೆ ಸಹಕರಿಸೋಣ ಎಂದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಎಚ್ ಭಾರತೀ ಸುರೇಶ್ ಮಾತನಾಡಿ ಈ ನಮ್ಮ ಗ್ರಾಮದ ಶಾಲೆಯು ಸಹ ಬಡ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯನ್ನು ನೀಡುವ ಮೂಲಕ ಮಾದರಿ ಶಾಲೆಯಾಗಿರುವುದು ನಮ್ಮೆಲ್ಲರ ಸೌಭಾಗ್ಯವೇ ಸರಿ ಎಂದು ಸಂತಸ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜುಲೇಖಾಬಿ ಮಹಮದ್ ಯೂಸುಫ್ ಮಾತನಾಡಿ, ಇಂತಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ನಾವುಗಳು ಪುಣ್ಯ ವಂತರು. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಶಾಲೆಯ ಅಭಿವೃದ್ಧಿ ಹಾಗೂ ನಮಗೆ ವಿದ್ಯಾರ್ಜನೆ ನೀಡಿದ ಶಿಕ್ಷಕರಿಗೆ ನಾವು ಅಭಿನಂದನೆ ಸಲ್ಲಿಸುವುದು ನಮ್ಮಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ. ವಿಶೇಷ ಅಧಿಕಾರಿ ರಾಜಶೇಖರ್. ಮುಖ್ಯ ಶಿಕ್ಷಕರಾದ ಮೊಹಮ್ಮದ್ ಮೊಯಿಸಿನ್. ನಿವೃತ್ತ ಮುಖ್ಯ ಶಿಕ್ಷಕ ಮಹದೇವಯ್ಯ. ಹಳೇಯ ವಿದ್ಯಾರ್ಥಿಗಳಾದ ಪ್ರಥಮ ದರ್ಜೆ ಗುತ್ತಿಗೆದಾರ ಚೆನ್ನೈಗಪ್ಪ. ವಿದ್ಯುತ್ ಗುತ್ತಿಗೆದಾರ ರುದ್ರಪ್ರಕಾಶ್. ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯ ರಾಜು. ಗ್ರಾಮ ಪಂಚಾಯತಿ ಸದಸ್ಯ ಮಾಯಣ್ಣಗೌಡ. ಗ್ರಾಮ ಪಂಚಾಯತಿ ಸದಸ್ಯ ಕೆ ಎಲ್ ಉಮೇಶ್. ಯೋಗಮೂರ್ತಚಾರ್. ತಿಮ್ಮರಾಜು. ಶೀಬಿ ಶಂಕರ್. ಜೆ. ಪಿ. ಬಸವರಾಜು. ಭೈರಪ್ಪ. ಶಿವಯ್ಯ. ಇತರರು. ಸಿದ್ದಗಂಗಾ ಶಾಲೆಯ ಶಿಕ್ಷಕರು ಹಾಜರಿದ್ದರು.