ಇತ್ತೀಚೆಗೆ ಮೈಸೂರಿನಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ವೈದ್ಯರ ದಿನಾಚರಣೆಯಲ್ಲಿ ಯಶಸ್ವಿ ವೈದ್ಯ ಉದ್ಯಮಿ ಪ್ರಶಸ್ತಿಯನ್ನು ಪಟ್ಟಣದ ಖ್ಯಾತ ಹೃದ್ರೋಗ ತಜ್ಞ ಡಾ.ಕೆ. ನಾಗೇಶ್ ಸ್ವೀಕರಿಸಿದರು. ಪ್ರಶಸ್ತಿಯನ್ನು ಕರ್ನಾಟಕ ರಾಜ್ಯದ ಬೃಹತ್ ನೀರಾವರಿ ಸಚಿವ ಎನ್. ಚೆಲುವರಾಯಸ್ವಾಮಿ ನೀಡಿದರು. ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಬಿ ಸಿ ಭಗವಾನ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಇತ್ತೀಚೆಗೆ ಮೈಸೂರಿನಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ವೈದ್ಯರ ದಿನಾಚರಣೆಯಲ್ಲಿ ಯಶಸ್ವಿ ವೈದ್ಯ ಉದ್ಯಮಿ ಪ್ರಶಸ್ತಿಯನ್ನು ಪಟ್ಟಣದ ಖ್ಯಾತ ಹೃದ್ರೋಗ ತಜ್ಞ ಡಾ.ಕೆ. ನಾಗೇಶ್ ಸ್ವೀಕರಿಸಿದರು. ಪ್ರಶಸ್ತಿಯನ್ನು ಕರ್ನಾಟಕ ರಾಜ್ಯದ ಬೃಹತ್ ನೀರಾವರಿ ಸಚಿವ ಎನ್. ಚೆಲುವರಾಯಸ್ವಾಮಿ ನೀಡಿದರು.

ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಬಿ ಸಿ ಭಗವಾನ್ ಉದ್ಘಾಟಿಸಿದರು. ಅತಿಥಿಗಳಾದ ಕುಣಿಗಲ್ ಶಾಸಕ ಡಾ. ರಂಗನಾಥ್, ಹುಣಸೂರು ಶಾಸಕ ಹರೀಶ್‌ಗೌಡ, ಹಾಗೂ ನೇಗಿಲ ಯೋಗಿ ಸಮಾಜ ಸೇವ ಟ್ರಸ್ಟ್‌ನ ಪದಾಧಿಕಾರಿಗಳಾದ ರವಿಕುಮಾರ್, ಶೋಭಾ ಭಾಗವಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿಗಳಾ ಡಾ. ಶೇಖರ್ ವಹಿಸಿದರು.