ಸಾರಾಂಶ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗದ ಹೊರವಲಯ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ತಂಡ ಗುರುವಾರ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.
ಗುರುವಾರ ಬೆಳಗ್ಗೆ 5 ಗಂಟೆಗೆ ದಾಳಿ ನಡೆಸಲಾಗಿದ್ದು, ಸುಮಾರು 5 ಗಂಟೆಗಳ ಕಾಲ ಜೈಲಿನ ಪ್ರತಿ ಬ್ಯಾರಕ್ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಪರಿಶೀಲನೆ ನಡೆಸ ಲಾಗಿದೆ. ಜೈಲ್‌ನಲ್ಲಿ ನಿಷೇದಿತ ವಸ್ತುಗಳಾದ ಗಾಂಜಾ, ತಂಬಾಕು ಸೇರಿದಂತೆ ಮೊಬೈಲ್ ಇರುವ ಕುರಿತು ತಲಾಷ್ ಮಾಡಲಾಗಿದೆ. ಆದರೆ, ದಾಳಿಯ ವೇಳೆ ಯಾವುದೇ ವಸ್ತುಗಳು ಲಭ್ಯವಾಗಿಲ್ಲ ಎಂಬುದು ತಿಳಿದು ಬಂದಿದೆ.ಇನ್ನು, ಈ ದಾಳಿಯನ್ನು ಕಳೆದ ವಾರ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ದ್ವಿತೀಯ ಪುತ್ರ ಬಸವೇಶ್ ಅವರ ಮೇಲೆ ನಡೆದ ಕೊಲೆ ಯತ್ನದ ಹಿನ್ನೆಲೆ ಯಲ್ಲಿ ದಾಳಿ ನಡೆಸಿರಬಹುದಾಗಿದೆ ಎನ್ನಲಾಗುತ್ತಿದೆ. ಬಸವೇಶ್ ಕೊಲೆಗೆ ಜೈಲ್‌ನಿಂದ ಸುಪಾರಿ ನೀಡಲಾಗಿತ್ತು ಎಂದು ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
----------------ಪೊಟೋ: 28ಎಸ್ಎಂಜಿಕೆಪಿ05
ಶಿವಮೊಗ್ಗ ಹೊರವಲಯ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲಿಸಲಾಯಿತು.