ಸಕ್ಕರೆ ಕಾರ್ಖಾನೆ ಅವ್ಯವಹಾರ, ಬೆಂಗಳೂರಿನಲ್ಲಿ ಸಭೆ ನಡೆಸಿ ಪರಿಹಾರ: ಡಿಕೆಶಿ ಭರವಸೆ

| N/A | Published : Mar 03 2025, 01:51 AM IST / Updated: Mar 03 2025, 11:48 AM IST

ಸಕ್ಕರೆ ಕಾರ್ಖಾನೆ ಅವ್ಯವಹಾರ, ಬೆಂಗಳೂರಿನಲ್ಲಿ ಸಭೆ ನಡೆಸಿ ಪರಿಹಾರ: ಡಿಕೆಶಿ ಭರವಸೆ
Share this Article
  • FB
  • TW
  • Linkdin
  • Email

ಸಾರಾಂಶ

ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರು.ಗಳ ಅವ್ಯವಹಾರದಲ್ಲಿ ಅನ್ಯಾಯಕ್ಕೊಳಗಾಗಿರುವವರಿಗೆ ನ್ಯಾಯ ಕೊಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

 ಬ್ರಹ್ಮಾವರ :  ಇಲ್ಲಿನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರು.ಗಳ ಅವ್ಯವಹಾರದಲ್ಲಿ ಅನ್ಯಾಯಕ್ಕೊಳಗಾಗಿರುವವರಿಗೆ ನ್ಯಾಯ ಕೊಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. 

ಅವ್ಯವಹಾರದ ತನಿಖೆಗಾಗಿ ರಾಹೆ 66ರ ಸಮೀಪ ಸಕ್ಕರೆ ಕಾರ್ಖಾನೆ ಎದುರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು ಮುಖ್ಯಮಂತ್ರಿ ಭಾನುವಾರ ಭೇಟಿಯಾಗಿ ಅವರ ಅಹವಾಲು ಆಲಿಸಿದರು.ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಗ್ಗೆ ನನಗೂ ಸ್ವಲ್ಪ ತಿಳಿದಿದೆ. ನಾನು ಸಹಕಾರ ಮಂತ್ರಿಯಾಗಿದ್ದಾಗ, ಆಸ್ಕರ್ ಫರ್ನಾಂಡಿಸ್ ಕಾರ್ಖಾನೆಯ ಅಧ್ಯಕ್ಷರಾಗಿದ್ದರು. 

ಈಗ ಇಲ್ಲಿ ಟೆಂಡರ್ ಕರೆದು ಕೆಲಸ ಆರಂಭಿಸಬೇಕು ಎಂದು ತೀರ್ಮಾನ ಆಗಿದೆ. ಮಾ.8ರ ನಂತರ ನಿಮ್ಮಲ್ಲಿ ಮೂರ್ನಾಲ್ಕು ಜನ ಬೆಂಗಳೂರಿಗೆ ಬಂದರೆ, ಗೃಹಸಚಿವರು ಹಾಗೂ ಸಹಕಾರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಒಂದು ಸಭೆ ಮಾಡೋಣ ಎಂದು ಸಲಹೆ ನೀಡಿದರು.

ಪ್ರತಿಭಟನಾಕಾರರ ಮನವಿಯ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಗಮನಕ್ಕೆ ತರಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ಇಲ್ಲಿ ಯಾರು ಕಳ್ಳರು, ಯಾರು ಕಳ್ಳರಲ್ಲ ಎಂದು ಹೇಳಲು ಹಿಂಜರಿಯುತ್ತಾರೆ. ಸಭೆ ನಡೆಸಿ ಯಾವ ರೀತಿ ನ್ಯಾಯ ಕೊಡಿಸಲು ಸಾಧ್ಯವೋ, ಚರ್ಚೆ ಮಾಡೋಣ ಎಂದರು.

ಹೋರಾಟದ ನೇತೃತ್ವ ವಹಿಸಿರುವ ಮಾಜಿ ಸ್ಪೀಕರ್ ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಹೋರಾಟ ಕೈಬಿಡುವಂತೆ ಡಿಸಿಎಂ ಮನವಿ ಮಾಡಿದರು.

ಪಕ್ಷದ ನಾಯಕರಾದ ವಿನಯಕುಮಾರ್ ಸೊರಕೆ, ಜಯಪ್ರಕಾಶ್‌ ಹೆಗ್ಡೆ, ಎಂ.ಎ.ಗಫೂರ್, ಮುನಿಯಾಲು ಉದಯಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮುಂತಾದವರಿದ್ದರು.