ಸಾರಾಂಶ
ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಬೀಳಗಿ ಶುಗರ್ ಘಟಕದಲ್ಲಿ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಪೂಜಾ ಕಾರ್ಯವನ್ನು ರೈತರೊಂದಿಗೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಚಾಲನೆ ನೀಡಿದರು.
ಬೀಳಗಿ: ತಾಲೂಕಿನ ಬಾಡಗಂಡಿ ಗ್ರಾಮದ ಬೀಳಗಿ ಶುಗರ್ ಘಟಕದಲ್ಲಿ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಪೂಜಾ ಕಾರ್ಯವನ್ನು ರೈತರೊಂದಿಗೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಚಾಲನೆ ನೀಡಿದರು.
ಬಳಿಕ ಮಾತನಾಡಿ, ರೈತರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಸಿ, ಕಾರ್ಖಾನೆಯ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಗತಿಗೆ ಸಹಕಾರ ನೀಡುವಂತೆ ಮಾಜಿ ಸಚಿವ ಎಸ್.ಆರ್. ಪಾಟೀಲ ರೈತರಲ್ಲಿ ಮನವಿ ಮಾಡಿದ ಅವರು, ರೈತ ಬಂಧುಗಳ ಶ್ರಮ, ನಿಷ್ಠೆ ಮತ್ತು ಬೆಂಬಲವೇ ನಮ್ಮ ಕಾರ್ಖಾನೆಯ ನಿಜವಾದ ಶಕ್ತಿ. ನಿಮ್ಮೆಲ್ಲರ ಸಹಕಾರದಿಂದ ಈ ಹಂಗಾಮು ಯಶಸ್ವಿಯಾಗಿ ಸಾಗುವ ವಿಶ್ವಾಸವಿದೆ ಎಂದರು. ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಕಾರ್ಖಾನೆಯ ವಿವಿಧ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))