ಕನ್ನಡಪ್ರಭ ವಾರ್ತೆ ಗೋಕಾಕಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶುಕ್ರವಾರ ಸಂಜೆ ತೀವ್ರ ಸ್ವರೂಪ ಪಡೆದುಕೊಂಡಿತು. ಯಲ್ಲಮ್ಮನ ಗುಡ್ಡ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾರಾಷ್ಟ್ರಕ್ಕೆ ವಾಪಸಾಗುತ್ತಿದ್ದ ಮಹಾರಾಷ್ಟ್ರದ ವೈದ್ಯಕೀಯ ಸಚಿವ ಹಸನ್ ಮುಶ್ರಿಫ್ ಅವರ ಕಾರನ್ನು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ರೈತರು ಅಡ್ಡಗಟ್ಟಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶುಕ್ರವಾರ ಸಂಜೆ ತೀವ್ರ ಸ್ವರೂಪ ಪಡೆದುಕೊಂಡಿತು. ಯಲ್ಲಮ್ಮನ ಗುಡ್ಡ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾರಾಷ್ಟ್ರಕ್ಕೆ ವಾಪಸಾಗುತ್ತಿದ್ದ ಮಹಾರಾಷ್ಟ್ರದ ವೈದ್ಯಕೀಯ ಸಚಿವ ಹಸನ್ ಮುಶ್ರಿಫ್ ಅವರ ಕಾರನ್ನು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ರೈತರು ಅಡ್ಡಗಟ್ಟಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಕಬ್ಬಿನ ಬೆಲೆ ನಿಗದಿಗೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದ ರೈತರು, ಸಚಿವರ ಕಾರು ಬರುತ್ತಿದ್ದಂತೆಯೇ ಅದರ ಮುಂದೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಮನವೊಲಿಸಿ ಅಲ್ಲಿಂದ ತೆರಳುವಂತೆ ಮಾಡಲು ಪೊಲೀಸರು ಪ್ರಯತ್ನಿಸಿದರೂ ರೈತರು ತಮ್ಮ ಪಟ್ಟು ಸಡಿಲಿಸಲಿಲ್ಲ. ಕೊನೆಗೆ ಸ್ವತಃ ಸಚಿವ ಹಸನ್ ಮುಶ್ರಿಫ್ ಅವರೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸಚಿವರು ಬೇರೆ ಮಾರ್ಗದ ಮೂಲಕ ಮಹಾರಾಷ್ಟ್ರದತ್ತ ಪ್ರಯಾಣ ಬೆಳೆಸಿದರು.
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರಲ್ಲಿ ಹೆಚ್ಚುತ್ತಿರುವ ಅಸಮಾಧಾನಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.