ಸಾರಾಂಶ
ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಕುಂದಾಪುರ: ಇಲ್ಲಿನ ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಕ್ರೀಡಾಜ್ಯೋತಿ ಬೆಳಗಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವಂತೆ, ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವಂತೆ ಕಿವಿಮಾತು ಹೇಳಿದರು.ಬಳಿಕ ಟೀಚರ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಕಿಶನ್ ರಾಜ್ ಶೆಟ್ಟಿ ದೀಪ ಬೆಳಗಿಸಿ ಕ್ರೀಡಾಕೂಟ ಉದ್ಘಾಟಿಸಿದರು. ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮತ್ತು ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಅವರು ಕ್ರೀಡಾ ಧ್ವಜಾರೋಹಣಗೈದರು.ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರು ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿದರು. ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು. ಸುಜ್ಞಾನ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ, ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಹಾಗೂ ಕಾವ್ಯ ಶೆಟ್ಟಿ ಸಂಘಟಿಸಿದರು. ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))