ಸಾರಾಂಶ
ನೆಹರು ಯುವ ಕೇಂದ್ರದ ಯುವಜನ ಅಧಿಕಾರಿ ಎನ್.ಸುಹಾಸ್ ವರ್ಗಾವಣೆಯಾದ ಪ್ರಯುಕ್ತ ಗುರುವಾರ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನೆಹರು ಯುವ ಕೇಂದ್ರದ ಯುವಜನ ಅಧಿಕಾರಿ ಎನ್.ಸುಹಾಸ್ ಅವರು ಕೇರಳದ ತಿರುವನಂತಪುರಂ ಜಿಲ್ಲೆಗೆ ವರ್ಗಾವಣೆಯಾದ ಪ್ರಯುಕ್ತ ಗುರುವಾರ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ದೇಶಿಸಿ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಮಜಹರ್ ಉಲ್ಲಾ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 5 ವರ್ಷ 9ತಿಂಗಳು ನೆಹರು ಯುವ ಕೇಂದ್ರದ ಯುವಜನ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಎನ್.ಸುಹಾಸ್ ರವರು ಅತ್ಯಂತ ಪ್ರಾಮಾಣಿಕ ಸೇವೆ ಸಲ್ಲಿಸಿದರು.
ಯುವಜನರಲ್ಲಿ ಅರಿವು ಮೂಡಿಸುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರನ್ನು ದುಶ್ಚಟಗಳಿಂದ ದೂರವಿರಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿದರು. ವಿವಿಧ ರೀತಿಯ ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಮುಂದಾಳತ್ವ ವಹಿಸಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.ಎನ್‌ಎಸ್‌ಎಸ್ ಅಧಿಕಾರಿ ಡಾ.ಪ್ರಸಾದ್ ಮಾತನಾಡಿ, ಸುಹಾಸ್ ಅವರ ಕಾರ್ಯವೈಖರಿ ಶ್ಲಾಘನೀಯವಾದುದು. ಜಿಲ್ಲೆಗೆ ಅವರ ಸೇವೆ ಸಾಕಷ್ಟಿದೆ ಎಂದರು.
ನೂತನವಾಗಿ ಅಧಿಕಾರ ವಹಿಸಿಕೊಂಡ ಸಂಜೀವ್ ಬುಕ್ಯಾ ಮಾತನಾಡಿ, ಸುಹಾಸ್ ಅವರ ಸೇವಾ ಅವಧಿಯಲ್ಲಿ ನಿರ್ವಹಿಸಿದ ಕಾರ್ಯಕ್ರಮಗಳನ್ನು ಮುಂದೆಯೂ ಹೀಗೆಯೇ ನಡೆಸಿಕೊಂಡು ಹೋಗಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ರಮೇಶ್, ಬಹು ಕಾರ್ಯ ಸಿಬ್ಬಂದಿ ಭರತ್, ಅನ್ನಪೂರ್ಣ, ಅಮೃತ ನರ್ಸಿಂಗ್ ಕಾಲೇಜ್ ಪ್ರಾಂಶುಪಾಲ ವಜಾಹತ್ ಉಲ್ಲಾ, ಗೋಪಾಲ ಸ್ವಾಮಿ ನಾಯಕ, ಶ್ರೀನಿವಾಸ್ ಮಳಲಿ, ಮಡಿಲು ಸಂಘದ ಅಧ್ಯಕ್ಷ ಕುಮಾರ ಸ್ವಾಮಿ,ಎಸ್ ಬಾಬು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.