ಸಾರಾಂಶ
ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಎಂದು ನರಸೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ತಿಳಿಸಿದ್ದಾರೆ.
ದಾಬಸ್‌ಪೇಟೆ: ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಸಾವುಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ನರಸೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ತಿಳಿಸಿದರು.
ಪಟ್ಟಣದ ಸಿವಿಜಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಆತ್ಮಹತ್ಯೆಗೆ ಬಡವ-ಶ್ರೀಮಂತ, ಸುಶಿಕ್ಷಿತ-ಅವಿದ್ಯಾವಂತ, ಜಾತಿ, ಧರ್ಮ ಹಾಗೂ ವಯಸ್ಸಿನ ಬೇಧವಿಲ್ಲ. ಅದರಲ್ಲೂ ಹೆಚ್ಚಾಗಿ ಅಪ್ರಾಪ್ತ ವಯಸ್ಸಿನ ಮಕ್ಕಳೇ ಸಣ್ಣಪುಟ್ಟ ಕಾರಣಗಳಿಗಾಗಿ ತಮ್ಮ ಅಮೂಲ್ಯ ಜೀವ ಕಳೆದುಕೊಳ್ಳುತ್ತಿದ್ದಾರೆ. ಕಾಲೇಜಿನ ಯುವಕ ಮತ್ತು ಯುವತಿಯರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ತಾಳ್ಮೆಯ ಕೊರತೆ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಯಾವ ವ್ಯಕ್ತಿ ಆತ್ಮಹತ್ಯೆಗಳ ಬಗ್ಗೆ ಹೆಚ್ಚು ಮಾತನಾಡುತ್ತಿರುತ್ತಾರೋ ಅಂಥವರ ಬಗ್ಗೆ ನಾವು ತೀವ್ರ ನಿಗಾವಹಿಸಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಕಾಲೇಜಿನ ಪ್ರಾಂಶುಪಾಲ ಕೊದಂಡರಾಮ ಮಾತನಾಡಿದರು.ಆಶಾ ಕಾರ್ಯಕರ್ತೆಯರು, ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.