ಸುಜಲಾ ಕಾಲೇಜು ವಿದ್ಯಾರ್ಥಿನಿ ಸುಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

| Published : Nov 20 2024, 12:33 AM IST

ಸಾರಾಂಶ

ತುಮಕೂರಿನಲ್ಲಿ ನಡೆದ 2024-25ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹಾಸನ ನಗರದ ಸುಜಲಾ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಎಚ್ ಎನ್ 3000 ಮೀಟರ್‌ ಓಟ ಮತ್ತು ಗುಡ್ಡಗಾಡು ಓಟದ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಾರ್ಖಂಡ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿಯನ್ನು ಕಾಲೇಜಿನ ಅಧ್ಯಕ್ಷರು ಅಭಿನಂದಿಸಿದ್ದಾರೆ.

ಹಾಸನ: ತುಮಕೂರಿನಲ್ಲಿ ನಡೆದ 2024-25ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹಾಸನ ನಗರದ ಸುಜಲಾ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಎಚ್ ಎನ್ 3000 ಮೀಟರ್‌ ಓಟ ಮತ್ತು ಗುಡ್ಡಗಾಡು ಓಟದ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಾರ್ಖಂಡ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿನಿಯನ್ನು ಕಾಲೇಜಿನ ಅಧ್ಯಕ್ಷರಾದ ಡಾ. ಎಸ್ ಲೋಕೇಶ್, ಕಾರ್ಯದರ್ಶಿಗಳಾದ ಶ್ವೇತಾ ಲೋಕೇಶ್, ಪ್ರಾಂಶುಪಾಲರು ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.