ಸಾರಾಂಶ
24ರಂದು ಬಿಜೆಪಿಯ ಸ್ಟಾರ್ ಪ್ರಚಾರಕಲ್ಲೊಬ್ಬರಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ಉಡುಪಿ ನಗರದಲ್ಲಿ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಸರಣಿ ಕಾರ್ಯಕರ್ಮಗಳನ್ನು ಹಮ್ಮಿಕೊಳ್ಳಲಾಗಿದೆ.ಏ.19ರಂದು ಮಂಡ್ಯದ ಸಂಸದೆ ಸುಮಲತಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಗಮಿಸಲಿದ್ದಾರೆ. ಅವರು ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಸಮೀಪದ ಉಪ್ಪೂರು ಗ್ರಾಮದ ರಾಮಕ್ಷತ್ರೀಯ ಸಭಾಭವನದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
20ರಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಮಾವೇಶ ನಡೆಯಲಿದ್ದು, ಸಮಾವೇಶವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ವಿಜಯೇಂದ್ರ ಉದ್ಘಾಟಿಸಿ ಮಾತನಾಡಲಿದ್ದಾರೆ.21ರಂದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಪ್ರತಿ ಮಂಡಲದಲ್ಲಿ ಮನೆಮನೆಗೆ ತೆರಳಿ ಮೋದಿ ಮತ್ತು ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿ ಮತಯಾಚಿಸುವ ಮಹಾಭಿಯಾನ ನಡೆಯಲಿದೆ.
22ರಂದು ಉಡುಪಿಯ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಆಗಮಿಸಲಿದ್ದು, ಜಿಲ್ಲೆಯ 2 ಕಡೆಗಳಲ್ಲಿ ನಡೆಯುವ ಸಮಾವೇಶದಲ್ಲಿ ಮಾತನಾಡಲಿದ್ದಾರೆ.24ರಂದು ಬಿಜೆಪಿಯ ಸ್ಟಾರ್ ಪ್ರಚಾರಕಲ್ಲೊಬ್ಬರಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ಉಡುಪಿ ನಗರದಲ್ಲಿ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಎಲ್ಲ ಗಣ್ಯರ ಜೊತೆಗೆ ರಾಜ್ಯಮಟ್ಟದ ಇತರ ಸ್ಟಾರ್ ಪ್ರಚಾರಕರೂ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.