ಸಾರಾಂಶ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಯುವಜನರು ನಾಟಕದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ 60ಕ್ಕೂ ಅಧಿಕ ಯುವಜನರನ್ನು ಒಂದೆಡೆ ಸೇರಿಸಿಕೊಂಡು ಅವರ ಪ್ರತಿಭೆಗಳನ್ನು ಅನಾವರಣಗೊಳಿಸಲು ಅವಕಾಶ ನೀಡುತ್ತಾ, ಸಮಾಜದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸುತ್ತಾ ಬಂದಿರುವುದು ಸುಮನಸಾ ಕೊಡವೂರು ತಂಡದ ಸಾಧನೆ, ಶಿಸ್ತು ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 6ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಲಾವಿದ ಮಧುಕರ ಸನೀಲ್ ಉದ್ಯಾವರ ಅವರಿಗೆ ರಂಗಸಾಧಕ ಸನ್ಮಾನ ನೀಡಿ ಗೌರವಿಸಲಾಯಿತು. ಮಲ್ಪೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ಉಡುಪಿ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಮುದ್ರಣ ಮಾಲೀಕರ ಸಂಘದ ಕಾಪು ವಲಯ ಅಧ್ಯಕ್ಷ ಸುಧೀರ್ ಡಿ. ಬಂಗೇರ, ಕೀಳಂಜೆ ಬಿ.ವಿ. ಹೆಗ್ಡೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಖಾರಾಮ್ ಶೆಟ್ಟಿ, ಕೊಡವೂರು ಉದ್ಯಮಿ ರಾಮಚಂದ್ರ ಕರ್ಕೇರ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮಲ್ಪೆ ಉದ್ಯಮಿ ಪ್ರಕಾಶ್ ಬಂಗೇರ, ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ., ದಿವಾಕರ್ ಕಟೀಲ್, ಅಶೋಕ್ ಅಮ್ಮುಂಜೆ ಮತ್ತಿತರರು ಹಾಜರಿದ್ದರು.ಯೋಗೀಶ್ ಕೊಳಲಗಿರಿ ಸ್ವಾಗತಿಸಿದರು. ಶ್ರೀವತ್ಸ ರಾವ್ ವಂದಿಸಿದರು. ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.‘ಸಮುದಾಯ ಬೆಂಗಳೂರು’ ಕಲಾವಿದರಿಂದ ‘ಕರಿಯ ದೇವರ ಹುಡುಕಿ’ ನಾಟಕ ಪ್ರದರ್ಶನಗೊಂಡಿತು.