ಸಮೀರವಾಡಿ ದತ್ತಿ ಪ್ರಶಸ್ತಿಗೆ ಸುಮಿತ್ ಮೇತ್ರಿ ಆಯ್ಕೆ

| Published : Mar 19 2024, 12:55 AM IST / Updated: Mar 19 2024, 12:56 AM IST

ಸಮೀರವಾಡಿ ದತ್ತಿ ಪ್ರಶಸ್ತಿಗೆ ಸುಮಿತ್ ಮೇತ್ರಿ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಕಲಕೇರಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಬಾಗಲಕೋಟೆ ಅವರು ಕೊಡಮಾಡುವ ಸಮೀರವಾಡಿ ದತ್ತಿ ಪ್ರಶಸ್ತಿಗೆ ಕವಿ ಸುಮಿತ್ ಮೇತ್ರಿ ಆಯ್ಕೆ ಆಗಿದ್ದಾರೆ. ''ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ'' (2019), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆಯ ''ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ-ಹಲಸಂಗಿ (2022) ''ಈ ಕಣ್ಣುಗಳಿಗೆ ಸದಾ ನೀರಡಿಕೆ''(2023) ಪ್ರಕಟಿತ ಕೃತಿಗಳು. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಬರೆದ ''ಅರಗಿನ ಅರಮನೆ'' (2017) ಅಪ್ರಕಟಿತ ನಾಟಕ.

ಕಲಕೇರಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಬಾಗಲಕೋಟೆ ಅವರು ಕೊಡಮಾಡುವ ಸಮೀರವಾಡಿ ದತ್ತಿ ಪ್ರಶಸ್ತಿಗೆ ಕವಿ ಸುಮಿತ್ ಮೇತ್ರಿ ಆಯ್ಕೆ ಆಗಿದ್ದಾರೆ.''''ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ'''' (2019), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆಯ ''''ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ-ಹಲಸಂಗಿ (2022) ''''ಈ ಕಣ್ಣುಗಳಿಗೆ ಸದಾ ನೀರಡಿಕೆ''''(2023) ಪ್ರಕಟಿತ ಕೃತಿಗಳು. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಬರೆದ ''''ಅರಗಿನ ಅರಮನೆ'''' (2017) ಅಪ್ರಕಟಿತ ನಾಟಕ. 2019ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವಕವಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರೊ.ಡಿ.ಸಿ. ಅನಂತಸ್ವಾಮಿ ದತ್ತಿ, ಸಾಹಿತ್ಯ ಸಂಗಮ ಕೊಡಮಾಡುವ ಹರಿಹರ ಶ್ರೀ ಪ್ರಶಸ್ತಿ, ಸಾಹಿತ್ಯ ಚಿಗುರು, ಸಾಹಿತ್ಯ ಸಿರಿ ಪ್ರಶಸ್ತಿ ಸೇರಿದಂತೆ ಹಲವು ಪುಸ್ತಕ ಬಹುಮಾನ ಹಾಗೂ ಜನಮಿತ್ರ, ಜನಶಕ್ತಿ ಹೀಗೆ ಹಲವು ಕಾವ್ಯಸ್ಪರ್ಧೆಗಳಿಂದ ಪುರಸ್ಕಾರಾಗಿರುವ ಇವರ ಕವಿತೆಗಳು ಇಂಗ್ಲಿಷ್ ಒಳಗೊಂಡಂತೆ ಭಾರತದ ಇತರ ಭಾಷೆಗಳಿಗೂ ಅನುವಾದಗೊಂಡಿವೆ. ಹೊಸ ಕನ್ನಡ ಕಾವ್ಯದ ಅತ್ಯಾಕರ್ಷಕ ಧ್ವನಿಗಳಲ್ಲಿ ಒಬ್ಬರಾಗಿ, ಧಗಧಗಿಸುವ ನಿಶ್ಯಬ್ಧದೊಂದಿಗೆ ಆತ್ಮವಿಶ್ವಾಸ, ನಿರ್ಭೀತವಾಗಿ ಹೊಸ ಸಾಧ್ಯತೆಗಳ ಹುಡುಕಾಟದಲ್ಲಿರುವ ಇವರ ಕವಿತೆಗಳು ಕಾವ್ಯಾಸಕ್ತರ ಗಮನ ಸೆಳೆದಿವೆ. ಈಗ ಇವರ "ಈ ಕಣ್ಣುಗಳಿಗೆ ಸದಾ ನೀರಡಿಕೆ " ಕವನ ಸಂಕಲನಕ್ಕೆ ಸಮೀರವಾಡಿ ದತ್ತಿ ಪ್ರಶಸ್ತಿ ದೊರೆತಿದೆ.