ಸಾರಾಂಶ
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಅಂಕಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಮಿತ್ರಾ ದೊಡ್ಡೀರಯ್ಯ ಉಪಾಧ್ಯಕ್ಷರಾಗಿ ಸುಜಾತ ರಮೇಶ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ ಹಾಗೂ ಉಪಾಧ್ಯಕ್ಷೆ ಸುಮಿತ್ರಾ ರಾಜೀನಾಮೆ ನೀಡಿ ತೆರವಾಗಿದ್ದ ಎರಡನೇ ಅವಧಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷಸ್ಥಾನಕ್ಕೆ ಸುಮಿತ್ರ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ಸುಜಾತ ಇವರು ಏಕೈಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರಿಂದ ಚುನಾವಣೆ ಅಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿದರು.
ಗ್ರಾಮ ಪಂಚಾಯಿತಿ ಸಂಭಾಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯನ್ನು ಚುನಾವಣೆ ಅಧಿಕಾರಿ ಮೋಹನ್ ನಡೆಸಿಕೊಟ್ಟರು.ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಮಾತನಾಡಿ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಸೌಕರ್ಯ ಒದಗಿಸಿ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ನೀಡುವ ಕೆಲಸ ಎಲ್ಲಾ ಸದಸ್ಯರ ವಿಶ್ವಾಸದಲ್ಲಿ ನಡೆಸುತ್ತೇನೆ ಎಂದರು.
ಕುಡಿಯುವ ನೀರು, ಶೌಚಾಲಯ, ರಸ್ತೆ, ಬೀದಿ ದೀಪ ಸೇರಿದಂತೆ ವಸತಿ ಯೋಜನೆಗ ಸೇರಿದಂತೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ನೀಡುತ್ತೆನೆ ಎಂದು ಭರವಸೆ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯ ಗುರುಲಿಂಗಯ್ಯ ಮಾತನಾಡಿ ಅಂಕಸಂದ್ರ ಗ್ರಾಮ ಪಂಚಾಯಿತಿ ಹಿಂದುಳಿದ ಪ್ರದೇಶವಾಗಿದೆ. ಅಧ್ಯಕ್ಷರು ಕ್ಷೇತ್ರದ ಶಾಸಕರು, ಸಚಿವರು, ಸಂಸದರ ಅನುದಾನ ತಂದು ಅಂಕಸಂದ್ರ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಬೇಕು. ಜಲಜೀವನ್ ಯೋಜನೆ ಗ್ರಾಮೀಣ ಭಾಗದಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಬೇಕಾಬಿಟ್ಟಿ ಕೆಲಸ ಮಾಡಿದ್ದಾರೆ. ನಲ್ಲಿಗಳು ಇಲ್ಲ ಟ್ಯಾಂಕರ್ ಇಲ್ಲಒಟ್ಟಾರೆ ಅಂಕಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಕಳಪೆಕಾಮಾಗಾರಿ ಮಾಡಿದಾರೆ ಅಧಿಕಾರಿಗಳು ಗಮನಹರಿಸಿ ಗುಣ ಮಟ್ಟದ ಕಾಮಗಾರಿ ಮಾಡಬೇಕು ಎಂದು ತಿಳಿಸಿದರು.