ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರಗಳು ಪೂರಕ

| Published : May 04 2024, 12:37 AM IST

ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರಗಳು ಪೂರಕ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜತೆಗೆ ವ್ಯಕ್ತಿತ್ವ ರೂಪಿಸುವುದಕ್ಕಾಗಿ ಪ್ರತಿವರ್ಷ ಉಚಿತ ಬೇಸಿಗೆ ತರಬೇತಿ ಶಿಬಿರ ಹಮ್ಮಿಕೊಂಡಿರುವುದು ಸಂತಸ. ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಮಂಜಮ್ಮ ತಿಳಿಸಿದರು.

ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದ ಗ್ರಂಥಾಲಯದಲ್ಲಿ 5ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಲೆಗೆ ರಜೆ ಬಂದರೆ ಮಕ್ಕಳು ವಿವಿಧ ಆಟೋಟಗಳು ಸೇರಿದಂತೆ ಕೇವಲ ಟಿವಿ, ಮೊಬೈಲ್, ಟ್ಯಾಬ್‌ಗಳ ಮುಂದೆ ಕುಳಿತು ತಮ್ಮ ಕ್ರಿಯಾಶೀಲತೆ ಕಳೆದುಕೊಳ್ಳುತ್ತಿದ್ದಾರೆ. ಎಳೆಯ ವಯಸ್ಸಿನಲ್ಲಿಯೇ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹಿಸುವ ಮೂಲಕ ಅವರ ಪ್ರತಿಭೆ ಗುರುತಿಸಬೇಕು. ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವಂತೆ ಮನವರಿಕೆ ಮಾಡಿಕೊಡಬೇಕು ಎಂದರು.

ಗ್ರಂಥಾಲಯ ಮೇಲ್ವಿಚಾರಕಿ ಶಾರದಮ್ಮ ಮಾತನಾಡಿ, ಶಿಬಿರದಲ್ಲಿ ಯೋಗ, ಕರಕುಶಲತೆ, ಸಂಗೀತ, ದೈಹಿಕ ಶಿಕ್ಷಣ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಯೋಗ, ಕರಾಟೆ, ಒಲೆ ಇಲ್ಲದೆ ಅಡುಗೆ ಮಾಡುವುದು ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಚಂದ್ರಯ್ಯ, ಸಿಬ್ಬಂದಿ ವೀರಭದ್ರಸ್ವಾಮಿ, ರಮೇಶ್ ಇತರರು ಉಪಸ್ಥಿತರಿದ್ದರು.ಪೋಟೋ 6 : ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಗ್ರಾಪಂ ಕಾರ್ಯದರ್ಶಿ ಚಂದ್ರಯ್ಯ, ಗ್ರಂಥಾಲಯ ಮೇಲ್ವಿಚಾರಕಿ ಶಾರದಮ್ಮ ಚಾಲನೆ ನೀಡಿ ಮಾತನಾಡಿದರು.