ಸಾರಾಂಶ
ಸರ್ಕಾರಿ ಪದವಿಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದ ಬೇಸಿಗೆ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದ ಬೇಸಿಗೆ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಈಚೆಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾಲ್ಫಿನ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ.ಇ. ಮಹೇಶ್ ವಹಿಸಿದ್ದರು. ಈ ಸಂದರ್ಭ ಹಿರಿಯ ಹಾಕಿ ಆಟಗಾರರಾದ ಸಿ.ಎಲ್. ಸುಬ್ಬಯ್ಯ ಮಾಸ್ಟರ್, ಕುಶಾಲನಗರದ ಉದ್ಯಮಿ ಬಿ.ಆರ್. ವೇಣು, ಮಾಜಿ ಸೈನಿಕ ಮಹೇಶ್ ಹಾಗೂ ಬಿ.ಎಲ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಆಟಗಾರರಾದ ಬಿ.ಕೆ. ಹಾಲಪ್ಪ, ಲಕ್ಷ್ಮಿಕಾಂತ್, ಬಿ.ಎಂ. ಸುರೇಶ್, ಶಶಿ, ಅಂತರರಾಷ್ಟ್ರೀಯ ಆಟಗಾರ ಆಭರಣ್ ಸುದೇವ್, ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಎಚ್.ಎನ್. ಅಶೋಕ್, ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ಸಹ ಕಾರ್ಯದರ್ಶಿ ಮಹೇಶ್, ಖಜಾಂಚಿ ಕೆ.ಜೆ. ಗಿರೀಶ್, ಮಾಯಾ ಗಿರೀಶ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))