ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸುನೀಲಗೌಡ ಒತ್ತಾಯ

| Published : Aug 13 2025, 02:31 AM IST

ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸುನೀಲಗೌಡ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಅಲ್ಲದೇ, ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಮಾಡಿದ್ದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೂಡ ಒಪ್ಪಿಗೆ ನೀಡಿದರು.

ವಿಧಾನ ಪರಿಷತ್‌ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಲಿಖಿತ ಉತ್ತರ ನೀಡಿದರು. ಈ ಉತ್ತರಕ್ಕೆ ತೃಪ್ತರಾಗದ ಶಾಸಕರು, ಕೇರಳ, ಹರಿಯಾಣ, ತಮಿಳನಾಡು, ತೆಲಗಾಂಣ ಹಾಗೂ ಮಧ್ಯ ಪ್ರದೇಶ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನೀಡಲಾಗುತ್ತಿರುವ ಗೌರವಧನ ಅತೀ ಕಡಿಮೆ ಇದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸರ್ಕಾರಿ ನೌಕರರ ವೇತನ ಹೆಚ್ಚಿಸಲಾಗಿದೆ. ಆದರೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಕಳೆದ ಒಂಬತ್ತು ವರ್ಷಗಳಿಂದ ಗೌರವಧನ ಹೆಚ್ಚಳ ಮಾಡಿಲ್ಲ. ಆದ್ದರಿಂದ ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಇಂದಿನ ದಿನಗಳಲ್ಲಿ ದಿನಗೂಲಿ ನೌಕರರಿಗೆ ನಿಗದಿ ಪಡಿಸಿರುವ ವೇತನ ಪುರಸಭೆಯ ಸದಸ್ಯರಿಗೆ ನೀಡಲಾಗುವ ಗೌರವಧನಕ್ಕಿಂತಲೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಸದನದಲ್ಲಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಶಾಸಕ ಸುನೀಲಗೌಡ ಪಾಟೀಲ ಮನವಿ ಮಾಡಿದರು. ಇದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವಕಾಶ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಸುನೀಲಗೌಡ ಪಾಟೀಲ ಅವರು ಅರ್ಧಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ನೀಡಿದರು.