ಕಲ್ಕೆರೆ ಗ್ರಾಪಂ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಆಯ್ಕೆ

| Published : Oct 27 2024, 02:42 AM IST

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿಯ ನಿಕಟ ಪೂರ್ವ ಅಧ್ಯಕ್ಷರಾದ ಜ್ಞಾನೇಂದ್ರರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುನೀಲ್ ಕುಮಾರ್‌ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸಾತೇನಹಳ್ಳಿ ಗ್ರಾಮದ ಎಸ್. ಪಿ. ಸುನಿಲ್ ಕುಮಾರ್‌ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿಗಳಾದ ಜಿ. ಆರ್‌. ಹರೀಶ್ ಘೋಷಣೆ ಮಾಡಿದರು.

ಚನ್ನರಾಯಪಟ್ಟಣ: ತಾಲೂಕಿನ ಕಸಬಾ ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿಯ ನಿಕಟ ಪೂರ್ವ ಅಧ್ಯಕ್ಷರಾದ ಜ್ಞಾನೇಂದ್ರರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುನೀಲ್ ಕುಮಾರ್‌ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸಾತೇನಹಳ್ಳಿ ಗ್ರಾಮದ ಎಸ್. ಪಿ. ಸುನಿಲ್ ಕುಮಾರ್‌ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿಗಳಾದ ಜಿ. ಆರ್‌. ಹರೀಶ್ ಘೋಷಣೆ ಮಾಡಿದರು. ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಣೆ ಮಾಡಿದರು. ನೂರಾರು ಜನ ಮುಖಂಡರು ಹಾಗೂ ಬೆಂಬಲಿಗರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇ ಒ ಹರೀಶ್, ಅಧ್ಯಕ್ಷರಾದ ಎಸ್ಪಿ ಸುನಿಲ್ ಕುಮಾರ್, ಉಪಾಧ್ಯಕ್ಷರಾದ ಬಿ ಆರ್‌ ಆಶಾ, ಮಾಜಿ ಅಧ್ಯಕ್ಷರಾದ ಜ್ಞಾನೇಂದ್ರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಸಿ.ಗಂಗಾಧರ್, ಗ್ರಾಮ ಪಂಚಾಯಿತಿ ಸದಸ್ಯರಾದ ವಾಸುದೇವ್, ಪ್ರಮೀಳಾ, ವಸಂತ, ಚೆಲುವೆಗೌಡ, ಶೈಲಾ, ಜಯಲಕ್ಷ್ಮಮ್ಮ, ಭವ್ಯ, ಸುಗುಣ, ಜೈ ಕುಮಾರ್, ದುಷ್ಯಂತ್ ಸೇರಿದಂತೆ ಇತರರು ಹಾಜರಿದ್ದರು.