ಕಾರ್ಕಳ: ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ಕುರಿತು ಜನರಿಗೆ ಪರಿಣಾಮಕಾರಿಯಾಗಿ ಮಾಹಿತಿ ನೀಡುವ ಮೂಲಕ ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಹೊಸ್ಮಾರಿನಲ್ಲಿ ನಡೆದ ಗ್ರಾಪಂ ವ್ಯಾಪ್ತಿಯ ಬೂತ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಉದ್ಘಾಟಿಸಿದರು. ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತಂದು ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದರು.

ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕರ್ತರಿಗೆ ಪಕ್ಷ ಸಂಘಟನೆ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. ಮುಂಬರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು.

ಬಿಜೆಪಿ ಉಪಾಧ್ಯಕ್ಷ ಜಯವರ್ಮ ಜೈನ್ ಮಾಪಾಲು, ಮಂಡಲ ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್, ಜಿಪಂ ಮಾಜಿ ಸದಸ್ಯೆ ದಿವ್ಯ ಗಿರೀಶ್ ಅಮಿನ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ, ತಾ ಪಂ ಮಾಜಿ ಸದಸ್ಯೆ ಮಂಜುಳ ವಿಶ್ವನಾಥ್ ಮತ್ತಿತರರಿದ್ದರು.