ಸುಂಟಿಕೊಪ್ಪ ಗ್ರಾಮ ಪಂಚಾಯಿತಿ: ವಿವಿಧ ಅ‍ಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ

| Published : Feb 01 2025, 12:00 AM IST

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ: ವಿವಿಧ ಅ‍ಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಸುಂಟಿಕೊಪ್ಪ ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರು. 40 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯವಾಗಿ ನಾವು ಪರಸ್ಪರ ಎದುರಾಳಿಗಳೇ ಹೊರತು ಅಭಿವೃದ್ಧಿ ವಿಷಯ ಬಂದಾಗ ನಾವೆಲ್ಲರೂ ಒಂದಾಗಿ ಸಾಗಬೇಕೆಂದು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಕರೆ ನೀಡಿದ್ದಾರೆ.

ಇಲ್ಲಿನ ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರು. 40 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಮುಖ್ಯಮಂತ್ರಿ ರಾಜ್ಯದ ಎಲ್ಲ ಶಾಸಕರಿಗೂ ತಲಾ 10 ಕೋಟಿ ರು.ನಂತೆ ನೀಡಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆಯ ನಿಗದಿತ ಅನುದಾನ ಬರ ಪರಿಹಾರ, ಮಳೆ ಪರಿಹಾರ, ತಾಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ ಎಂದು ವಿವರಿಸಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ವಾರ್ಡ್‌ಗಳಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದೂ ಇನ್ನೂ ಅಭಿವೃದ್ಧಿ ಕಾಣಬೇಕಾಗಿದೆ. ಆನೇಕ ರಸ್ತೆಗಳು, ಬಸ್ ನಿಲ್ದಾಣ, ಪ್ರವಾಸಿ ಮಂದಿರ ಹಾಗೂ ಸುಸ್ಸಜಿತ ಮಾರುಕಟ್ಟೆ ಸೇರಿದಂತೆ ಹಲವಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಾಗಿದೆ. ಇವೆಲ್ಲವನ್ನೂ ಮುಂದಿನ ದಿನಗಳಲ್ಲಿ ಹಂತಗಳಲ್ಲಿ ಪೂರ್ಣಗೊಳಿಸಲಾಗುವುದೆಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ, ಪಿಡಿಒ ವಿ.ಜಿ.ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮತಿ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್, ನಗರಾಧ್ಯಕ್ಷ ರಫೀಕ್ ಖಾನ್, ಹೋಬಳಿ ಅಧ್ಯಕ್ಷ ರಜಾಕ್, ಅಲ್ಪಸಂಖ್ಯಾತರ ಅಧ್ಯಕ್ಷ ಅಬ್ದುಲ್ ಅಜೀಜ್, ಪಂಚಾಯಿತಿ ಸದಸ್ಯರಾದ ನಾಗರತ್ನ, ಪಿ.ಎಫ್.ಸಬಾಸ್ಟಿನ್, ಆಲಿಕುಟ್ಟಿ, ಪ್ರಸಾದ್‌ ಕುಟ್ಟಪ್ಪ, ಶಬೀರ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ಮತ್ತಿತರರಿದ್ದರು.