ಸಾರಾಂಶ
ಸುಂಟಿಕೊಪ್ಪದಲ್ಲಿ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಬೇಕು ಎಂದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪದಲ್ಲಿ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಬೇಕು. ಪ್ಲಾಸ್ಟಿಕ್ ಮತ್ತು ಗಾಜುಗಳನ್ನು ಪ್ರತ್ಯೇಕವಾಗಿ ವಿಗಂಡಿಸುವುದರ ಮೂಲಕ ಸ್ವಚ್ಛ ಗ್ರಾಮ ಮತ್ತು ಸ್ವಚ್ಚ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು. ಕರೆ ನೀಡಿದರು.ಕಸ ವಿಲೇವಾರಿ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತಾಗಲು ಗ್ರಾಮದ ಪ್ರತಿಯೊಬ್ಬರೂ ಪಂಚಾಯಿತಿಯೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು.
ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರು. 55 ಲಕ್ಷದಷ್ಟು ಅನುದಾನ ನಿಗದಿಯಾಗಿದ್ದು, ಈ ಪೈಕಿ ಕಾನ್ಬೈಲ್ ಮಂಜಿಕೇರೆ ಮುಖ್ಯ ರಸ್ತೆಯನ್ನು ರು. 5 ಲಕ್ಷ ವೆಚ್ಚದಲ್ಲಿ ದುರಸ್ತಿಗೊಳಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.ಅಂದಗೋವೆ ಗಿರಿಜನ ಕಾಲೋನಿಯಲ್ಲಿ ವಿದ್ಯುತ್ ಸಂಪರ್ಕ ಕುಡಿಯುವ ನೀರಿನ ಯೋಜನೆ ಅದಷ್ಟು ಶೀಘ್ರವಾಗಿ ಪೂರೈಸುವ ನಿಟ್ಟಿನಲ್ಲಿ ಚೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರತ, ಉಪಾಧ್ಯಕ್ಷ ಅಬ್ಬಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್, ಕಾರ್ಯದರ್ಶಿ ರೂಬಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಸುಂಟಿಕೊಪ್ಪ ವಿಎಸ್ಎಸ್ ಎನ್ ಅಧ್ಯಕ್ಷ ಕೆ.ಎಸ್.ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.