ಸಾರಾಂಶ
ಕಳೆದ ಕೆಲವು ತಿಂಗಳುಗಳಿಂದ ಈ ವಾಹನ ಕೆಟ್ಟು ಹೋಗಿ ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಸಂಘಟನೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗೆ ದೂರು ಸಲ್ಲಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ದುರಸ್ತಿಗೀಡಾಗಿ ಮೂಲೆಗುಂಪಾಗಿದ್ದ ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ದುರಸ್ತಿಗೊಂಡು ಸಾರ್ವಜನಿಕ ಸೇವೆ ಮತ್ತೆ ಲಭ್ಯವಾಗಿದೆ.ಕಳೆದ ಕೆಲವು ತಿಂಗಳುಗಳಿಂದ ಈ ವಾಹನ ಕೆಟ್ಟು ಹೋಗಿ ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಸಂಘಟನೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗೆ ದೂರು ಸಲ್ಲಿಸಲಾಗಿತ್ತು. ಅಧಿಕಾರಿಗಳು ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಆ್ಯಂಬುಲೆನ್ಸ್ ವಾಹನದ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.
ಅಧಿಕಾರಿಯ ಕಾರ್ಯವನ್ನು ಯೂನಿಯನ್ ಜಿಲ್ಲಾಧ್ಯಕ್ಷ ಅಣ್ಣಾ ಶರೀಫ್, ಸಂಘಟನಾ ಕಾರ್ಯದರ್ಶಿ ಕೆ.ಎ.ಲತೀಫ್ ಶ್ಲಾಘಿಸಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಹಲವು ಸಮಸ್ಯೆಗಳ ಕುರಿತು ನ.6ರಂದು ಎಸ್‌ಡಿಟಿಯು ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಭೇಟಿ ಮಾಡಿ ಗಮನ ಸೆಳೆಯಲಾಗಿತ್ತು.ಸಮಸ್ಯೆ ಕುರಿತು ದೂರು ಸಲ್ಲಿಸಿದ ಜೊತೆಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸುವ ಬಗ್ಗೆ ಎಚ್ಚರಿಸಲಾಗಿತ್ತು.
ನ.7ರಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ವಾಹನ ದುರಸ್ತಿಗೆ ಕ್ರಮ ಕೈಗೊಂಡಿದ್ದರು.ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಷ್ರೂಶಕಿಯರು ಹಾಗೂ ಸಿಬ್ಬಂದಿ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಬೇಡಿಕೆಯನ್ನು ಮನವಿಯ ಮೂಲಕ ಸಲ್ಲಿಸಲಾಗಿದ್ದು ಕೂಡಲೇ ಇಲ್ಲಿನ ಸಮಸ್ಯೆ ಕುಂದು ಕೊರತೆಗಳನ್ನು ನೀಗಿಸಲು ಮುಂದಾಗಬೇಕೆಂದು ಸಂಘಟನೆ ಆಗ್ರಹಿಸಿದೆ.