ಸುಂಟಿಕೊಪ್ಪ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಸಾವು

| Published : Oct 14 2024, 01:22 AM IST

ಸುಂಟಿಕೊಪ್ಪ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಶನಿವಾರ ತಡರಾತ್ರಿ ಹಾಸನ ಜಿಲ್ಲೆಯ ಅರಸಿಕೇರೆಯಿಂದ ಮಡಿಕೇರಿ ದಸಾರ ವೀಕ್ಷಣೆಗೆಂದು ಯಮಹಾ ಆರ್‌ಎಕ್ಸ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಗದ್ದೆಹಳ್ಳದ ಬಳಿ ಬೈಕ್‌ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಮೋರಿಯೊಳಗೆ ಬಿದ್ದಿದೆ. ಹಿಂಬದಿ ಸವಾರ ಗೋಪಿನಾಥ್ (31) ರಸ್ತೆಗೆ ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಮಡಿಕೇರಿ ದಸರಾ ಸಮಾರಂಭ ಮುಗಿಸಿ ಪಿಕಪ್‌ನಲ್ಲಿ 9 ಮಂದಿ ಹುಣಸೂರಿನತ್ತ ಊರಿಗೆ ತೆರಳುತ್ತಿದ್ದರು. ಈ ವೇಳೆ ಪಿಕಪ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಂದನ್ (21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಪ್ರಯಾಣಿಸರು ಗಂಭೀರವಾಗಿ ಗಾಯಗೊಂಡರು. ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ಕಂಬಿಬಾಣೆ ಆಟೋ ಚಾಲಕ ಸುಧೀಶ್‌ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂಬಿಬಾಣೆಯಲ್ಲಿ ದಸರಾ ಸಮಾರಂಭ ಮುಗಿಸಿ ಮನೆಗೆ ತೆರಳಿದ ಸುಧೀಶ್‌ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಚ್‌.ವಿ. ಚಂದ್ರಶೇಖರ್ ಹಾಗೂ ಸಿಬ್ಬಂದಿ ಘಟನಾ ಸ್ಥಳಗಳಿಗೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.