ಸುಂಟಿಕೊಪ್ಪ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

| Published : Jun 05 2024, 12:30 AM IST

ಸಾರಾಂಶ

ಮಂಗಳವಾರ ಸಂಜೆ ಸುಂಟಿಕೊಪ್ಪ ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‌ಡಿಎಗಳಿಗೆ ಜಯಘೋಷಗಳನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಮಂಗಳವಾರ ಸಂಜೆ ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‌ಡಿಎಗಳಿಗೆ ಜಯಘೋಷಗಳನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಸುಂಟಿಕೊಪ್ಪ ಸ್ಥಾನೀಯ ಸಮಿತಿ ಅಧ್ಯಕ್ಷ ಧನು ಕಾವೇರಪ್ಪ, ಕಾರ್ಯದರ್ಶಿ ವಿ.ಕೆ.ರಾಜ, ಅಧ್ಯಕ್ಷ ಪ್ರಶಾಂತ್(ಕೋಕ), ಪಂಚಾಯಿತಿ ಸದಸ್ಯರಾದ ಬಿ.ಎಂ.ಸುರೇಶ್, ಗೀತಾ, ಪಕ್ಷದ ಹಿರಿಯ ಮುಖಂಡ ಡಿ.ನರಸಿಂಹ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಮಾಜಿ ಸದಸ್ಯರಾದ ಗೀತಾ, ಆನಂದ, ಹರೀಶ್, ಸಹನಾ ಹಾಗೂ ಬಿಜೆಪಿ ಕಾರ್ಯರ್ತರು ಇದ್ದರು.

ಶನಿವಾರಸಂತೆಯಲ್ಲಿ ಬಿಜೆಪಿ ವಿಜಯೋತ್ಸವ

ಲೋಕಸಭಾ ಚುನಾವಣೆಯ ಮೈಸೂರು -ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಕಿತ್ತೂರ್ ರಾಣಿ ಚೆನ್ನಮ್ಮ ವೃತ್ತದಲ್ಲಿ ಮಂಗಳವಾರ ಸಂಜೆ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಘು ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನೀಡಿದ ಕೊಡುಗೆಗಳನ್ನು ಗಮನಿಸಿ ನಮ್ಮ ಕೊಡಗಿನ ಜನತೆ ಮತ್ತೊಮ್ಮೆ ನರೇಂದ್ರ ಮೋದಿ ಜೊತೆ ಕೈಜೋಡಿಸಲು ಯದುವೀರ್ ಅವರನ್ನು ಆಯ್ಕೆ ಮಾಡಿದ್ದಾರೆ. ಕೊಡಗಿನ ಜನತೆ ಇವರ ಗ್ಯಾರಂಟಿಗೆ ನಂಬುವ ಜನತೆಯಲ್ಲ. ದೇಶ ರಕ್ಷಣೆ ಮಾಡುವಂತಹ ವ್ಯಕ್ತಿಯನ್ನ ಆಯ್ಕೆ ಮಾಡುತ್ತಾರೆ ಎಂದರು. ಬಿಜೆಪಿ ಮುಖಂಡ ಅನಂತ್ ಕುಮಾರ್, ಶಕ್ತಿಕೇಂದ್ರದ ಅಧ್ಯಕ್ಷ ಯತೀಶ್ ಕುಮಾರ್, ಯೋಗಾನಂದ, ಪ್ರಮುಖರಾದ ನಿತಿನ್‌, ಭುವನೇಶ್ವರಿ ಇದ್ದರು.