ಸುಂಟಿಕೊಪ್ಪ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸ್ವಾಗತ

| Published : Mar 28 2024, 12:51 AM IST / Updated: Mar 28 2024, 12:52 AM IST

ಸುಂಟಿಕೊಪ್ಪ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಲ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸ್ವಾಗತ ಕೋರಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬುಧವಾರ ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಕೋರಿದರು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಲ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸ್ವಾಗತ ಕೋರಿದರು.ಪ್ರಧಾನಿ ನರೇಂದ್ರ ಮೋದಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ನಾಯಕರಿಗೆ ಕಾರ್ಯಕರ್ತರು ಜೈಕಾರಗಳನ್ನು ಕೂಗಿದರು.

ಈ ಸಂದರ್ಭ ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಡಾ.ಶಶಿಕಾಂತ ರೈ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಿ.ಕೆ.ಪ್ರಶಾಂತ್, ವಾಸು, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ವಿಘ್ನೇಶ್,ಸುಂಟಿಕೊಪ್ಪ ಗ್ರಾ.ಪಂ.ಸದಸ್ಯ ಬಿ.ಎಂ.ಸುರೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಬಿ.ಐ.ಭವಾನಿ, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, 7ನೇಹೊಸಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಕುಶಾಲನಗರ: ಬಿ.ವೈ.ವಿಜಯೇಂದ್ರಗೆ ಮುಖಂಡರ ಸ್ವಾಗತ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಜಿಲ್ಲೆಗೆ ಆಗಮಿಸಿದ ಸಂದರ್ಭ ಕುಶಾಲನಗರ ಗಣಪತಿ ದೇವಾಲಯ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು.

ಸಂಸದ ಪ್ರತಾಪ್ ಸಿಂಹ, ಬಿಜೆಪಿ ಅಭ್ಯರ್ಥಿ ಯದುವೀರ್ ಜೊತೆಗೆ ಬಂದ ವಿಜಯೇಂದ್ರ ಅವರನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮತ್ತಿತರರು ಸ್ವಾಗತಿಸಿದರು.ನಂತರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ಹಂಚಿಕೆಯ ಸಂದರ್ಭ ಸೃಷ್ಟಿಯಾಗಿರುವ ಆಂತರಿಕ ಗೊಂದಲಗಳು ಬಗೆಹರಿಯಲಿವೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್, ಕುಶಾಲನಗರ ಮಂಡಲ ಅಧ್ಯಕ್ಷ ಎಂ.ಎಂ. ಚರಣ್, ಪುರಸಭೆ ಪ್ರತಿನಿಧಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.