ಸುಂಟಿಕೊಪ್ಪನಾಡು ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ

| Published : Dec 21 2024, 01:18 AM IST

ಸುಂಟಿಕೊಪ್ಪನಾಡು ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ಸುಂಟಿಕೊಪ್ಪನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭ ನಡೆಯಿತು. ಮಕ್ಕಳಿಗೆ ಕ್ರೀಡಾಕೂಟ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಬೆಳಗ್ಗಿನ ಜಾವ ವ್ಯಾಯಾಮ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನವನ ದೇಹದಲ್ಲಿ ವಿಟಮಿನ್ ‘ಡಿ’ ದೊರೆಯುತ್ತದೆ ಎಂದು ಬೆಂಗಳೂರಿನ ಬಿ.ಬಿ.ಎಂ.ಪಿ.ಹಿರಿಯ ಆರೋಗ್ಯ ಪರಿವೀಕ್ಷಕರಾದ ಕೆ.ಬಿ.ಸಂಧ್ಯಾ ಹೇಳಿದರು.

ಶುಕ್ರವಾರ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈ ಶಾಲೆಯು ನನ್ನ ವೈಯಕ್ತಿಕ ಬೆಳವಣಿಗೆಗೆ ತನ್ನದೆಯಾದ ಕೊಡುಗೆಯನ್ನು ನೀಡಿದೆ ಎಂದಿಗೂ ಈ ಶಾಲೆಯ ಋಣವನ್ನು ಮರೆಯಲು ಸಾಧ್ಯವಿಲ್ಲ. ನಾನು ಹಿರಿಯ ಸರಕಾರಿ ಅಧಿಕಾರಿಯಾಗಿದ್ದರೂ ಕೂಡ ಅಲ್ಲಿ ನನ್ನ ವೃತ್ತಿಪರತೆಯನ್ನು ಸಾಬೀತುಪಡಿಸಲು ಆತ್ಮಸ್ಥೈರ್ಯ, ಜ್ಞಾನ ಸಾಮರ್ಥ್ಯದಿಂದ ಈ ಶಾಲೆಯ ಶಿಕ್ಷಕರು ಕಾರಣಿಭೂತರೆಂದು ಭಾವುಕರಾಗಿ ಅವರು ಹೇಳಿದರು.

ರಾಜ್ಯದ ಉನ್ನತ ಅಧಿಕಾರಿಯಾಗಿದ್ದರೂ ವಿದ್ಯಾರ್ಥಿ ಎಂಬ ಭಾವನೆ ಹಳೆನೆನಪುಗಳಿಂದ ತುಂಬಿಕೊಂಡವು. ನಿತ್ಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಮುಂದಿನ ಭವಿಷ್ಯಕ್ಕೆ ಆರೋಗ್ಯವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬಹುದೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿಗಳಾದ ಕುಂಜಿಲನ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ.ರಾ.ಪ್ರಾ.ಶಾ.ಶಿ.ಸಂಘದ ಉಪಾಧ್ಯಕ್ಷರಾದ ಹಂಚೆಟ್ಟಿರ ಕರುಂಬಯ್ಯ, ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೃತ್ತ ಉಪ ಅರಣ್ಯಾ ಸಂರಕ್ಷಣಾಧಿಕಾರಿ ಎಂಎಸ್.ಸುರೇಶ್ ಚಂಗಪ್ಪ, ಮಾಜಿ ಸೈನಿಕ ಪಿ.ಎಸ್.ಲಕ್ಷ್ಮೀನಾರಾಯಣ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಕೆ.ಎಸ್. ಇಂದಿರಾ ಉಪಸ್ಥಿತರಿದ್ದರು.

ನಂತರ ಮಕ್ಕಳಿಗೆ ಕ್ರೀಡಾಕೂಟಗಳು ನೆರವೇರಿಸಲಾಯಿತು.