ಸಾರಾಂಶ
ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶುಕ್ರವಾರ ಪೋಷಕರು, ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ಸಂತೆ ನಡೆಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶುಕ್ರವಾರ ಪೋಷಕರು, ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ಸಂತೆ ನಡೆಯಿತು.ಪೋಷಕರ ಮತ್ತು ಶಿಕ್ಷಕರ ಮಹಾಸಭೆಯಲ್ಲಿ ಮಾತನಾಡಿದ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ಬಾಲಕೃಷ್ಣ, ಪೋಷಕರು ಮಕ್ಕಳ ಭವಿಷ್ಯದ ದಿಸೆಯಲ್ಲಿ ಮಕ್ಕಳ ವಿದ್ಯಾರ್ಜನೆಗೆ ಸಾಕಷ್ಟು ಪರಿಶ್ರಮ ವಹಿಸಿದರೆ ಸಾಲದು, ಮಕ್ಕಳ ವ್ಯಾಸಂಗದ ಸಂದರ್ಭ ಪ್ರಶಾಂತ ವಾತಾವರಣ ಒದಗಿಸಿಕೊಡಬೇಕೆಂದರು.ಕಾಲಕಾಲಕ್ಕೆ ಪೋಷಕರು ಶಿಕ್ಷಕರೊಂದಿಗೆ ನಿಕಟ ಸಂಪರ್ಕ ಹಾಗೂ ಶಾಲೆಗಳಿಗೆ ಭೇಟಿ ನೀಡುವುದರಿಂದ ಮಕ್ಕಳ ಕಲಿಕೆಯ ಪ್ರಮಾಣವು ಅಭಿವೃದ್ಧಿಗೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.ಮಕ್ಕಳ ಸಂತೆ:ಮಕ್ಕಳ ವ್ಯವಹಾರಿಕ ಜ್ಞಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಮಕ್ಕಳ ಸಂತೆ ಏರ್ಪಡಿಸಲಾಗಿತ್ತು. ಮಕ್ಕಳು ಮನೆ ಹಾಗೂ ತೋಟಗಳಲ್ಲಿ ಬೆಳೆದು ನಿಂತಿದ್ದ ಸೊಪ್ಪು, ಕಾಯಿ, ತರಕಾರಿಗಳು, ಪಾನಿಪೂರಿ, ಚುರುಮುರಿ ಸೇರಿದಂತೆ ಇನ್ನಿತರ ಖ್ಯಾದ್ಯವಸ್ತುಗಳನ್ನು ಮಾರಾಟ ಮಾಡಿದರು. ಪೋಷಕರು ಮತ್ತು ಶಿಕ್ಷಕರು ಬೆಂಬಲಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಿಲ್ ರೋಡ್ರಿಗಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಶಾಲಾ ಸಹಶಿಕ್ಷಕರಾದ ಚಿತ್ರ, ಲಿಯೋನಾ, ಸುನಂದ, ಪ್ರಕಾಶ, ಶಾಂತ ಹೆಗ್ಡೆ, ಜಯಶ್ರೀ ಪ್ರಥಮದರ್ಜೆ ಸಹಾಯಕಿ ಯಶೋದಾ ಮತ್ತು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಇದ್ದರು.;Resize=(128,128))
;Resize=(128,128))
;Resize=(128,128))