ಸಾರಾಂಶ
ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಭಾನುವಾರ ಕಡಿದು ಸ್ವಚ್ಛಗೊಳಿಸಿದರು.ಶ್ರೀ ಕ್ಷೇ. ಧ.ಗ್ರಾ.ಯೋ.ವತಿಯಿಂದ ವಾರ್ಷಿಕ ಕಾರ್ಯಕ್ರಮಗಳಲ್ಲಿ ಒಂದಾದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಕಾನ್‌ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಭವ್ಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳಾದ ಜನನಿ, ಮೂಕಾಂಬಿಕ, ಅನ್ನಪೂರ್ಣ, ಶ್ರೀ ಸರಸ್ವತಿ, ನೇತಾಜಿ ಹಾಗೂ ಪರಮೇಶ್ವರ ಸಂಘಗಳ ಪ್ರಂಬಧಕರು ಹಾಗೂ ಸಂಘದ ಸದಸ್ಯರು ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು.ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಉಪಾಧ್ಯಕ್ಷೆ ಗೀತಾ, ಒಕ್ಕೂಟ ಕಾರ್ಯದರ್ಶಿ ಪುಷ್ಪಲತ, ಸೇವಾ ಪ್ರತಿನಿಧಿ ಯಶೋಧ, ಶಾಲಾ ಸಮಿತಿ ಸದಸ್ಯರಾದ ನಾಗರಾಜು ಮತ್ತು ತಿಮ್ಮಪ್ಪ ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು ಇದ್ದರು.