ಸಾರಾಂಶ
ಸಂಜೀವಿನಿ ಒಕ್ಕೂಟ ವತಿಯಿಂದ ಪರಿವರ್ತನ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಅಭಿಯಾನ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸಂಜೀವಿನಿ ಒಕ್ಕೂಟ ವತಿಯಿಂದ ಪರಿವರ್ತನ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಅಭಿಯಾನ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಉದ್ಘಾಟಿಸಿ, ಇಂದಿನ ದಿನಗಳಲ್ಲಿ ಪ್ರೌಢವಸ್ಥೆಯಲ್ಲಿರುವ ಮಕ್ಕಳು ಹೆಚ್ಚಾಗಿ ದುಶ್ಚಟಕ್ಕ ಒಳಗಾಘಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸುತ್ತಮುತ್ತ ಮಾದಕ ವ್ಯಸನಿಗಳು ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆಯವರಿಗೆ ಮಾಹಿತಿ ನೀಡಿದಲ್ಲಿ ಅಂಥವರನ್ನು ಶಿಕ್ಷಿಸುವ ಮತ್ತು ಆರೋಗ್ಯವನ್ನು ರಕ್ಷಿಸುವ ಕಾರ್ಯವು ಆಗಲಿದೆ ಎಂದು ಹೇಳಿದರು.ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಸದಸ್ಯ ರಫೀಕ್ ಖಾನ್, ಸಂಜಿವಿನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸದಸ್ಯರಾದ ಗ್ರೇಸಿ ಡೇವಿಡ್, ಸ್ವರ್ಣ, ಗೀತಾ, ಶಾಂತಿ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.