ಸಾರಾಂಶ
ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ । 11 ದಿನಗಳ ಪೂಜೆ ಸಂಪನ್ನಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಇಲ್ಲಿನ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ ೬೧ನೇ ವರ್ಷದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆ ಭಾನುವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.ಬೆಳಗ್ಗೆಯಿಂದ ಗಣಹೋಮ, ಹೂವಿನ ಪೂಜೆ ನಡೆಯಿತು. ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.ದೇವಾಲಯದಲ್ಲಿ ಪ್ರಧಾನ ಅರ್ಚಕ ಗಣೇಶ್ ಶರ್ಮ, ಮಂಜುನಾಥ್ ಶರ್ಮ, ಗಣೇಶ್ ಉಪಾದ್ಯಾಯ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾಪೂಜೆ ಹಾಗೂ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿ ಮಾಡಲಾಯಿತು. ಬಳಿಕ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಮೂರ್ತಿಯನ್ನು ಕುಳ್ಳಿರಿಸಿ ಬೃಹತ್ ಶೋಭಾಯಾತ್ರೆ ಸಾಗಿತು.ರಾಮ ಮಂದಿರದಿಂದ ಆರಂಭಗೊಂಡ ಮೆರವಣಿಗೆ ಮಾದಾಪುರ ರಸ್ತೆಯಲ್ಲಿಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದತ್ತ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಅದೇ ಮಾರ್ಗವಾಗಿ ವಾಪಸಾಗಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ರಾತ್ರಿ ಗದ್ದೆಹಳ್ಳದ ಯಂಕನ ಉಲ್ಲಾಸ್ ಮತ್ತು ಯಂಕನ ಕರುಂಬಯ್ಯ ಅವರ ಕೆರೆಯಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ ಪೂಜೆ ಸಲ್ಲಿಸಿ ವಿಸರ್ಜಿಸುವುದರೊಂದಿಗೆ 11 ದಿನಗಳ ಸಂಭ್ರಮದ ಗಣೇಶೋತ್ಸವ ತೆರೆ ಕಂಡಿತು.
ಮೆರವಣಿಗೆಯುದ್ದಕ್ಕೂ ಡಿಜೆ, ಭಜನೆ, ಪಟಾಕಿಗಳು ಆಕರ್ಷಕವಾಗಿತ್ತು.ಸಮಿತಿ ಅಧ್ಯಕ್ಷ ವಿಘ್ನೇಶ್, ಉಪಾಧ್ಯಕ್ಷರಾದ ಬಿ.ಕೆ.ಪ್ರಶಾಂತ್, ಎಂ.ಗಣೇಶ್, ಸಿ.ಸುನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಎಚ್.ನಿಖಿಲ್, ಹಿರಿಯರಾದ ಶಾಂತರಾಮ ಕಾಮತ್, ಧನು ಕಾವೇರಪ್ಪ, ಪಿ.ಆರ್.ಸುನಿಲ್ ಕುಮಾರ್, ಪಟ್ಟೆಮನೆ ಉದಯಕುಮಾರ್, ಸುರೇಶ್ ಗೋಪಿ, ಪದಾಧಿಕಾರಿಗಳಾದ ಪದ್ಮನಾಭ, ಮಿಥುನ್, ಮಹೇಂದ್ರ, ದಿನುದೇವಯ್ಯ ಸೇರಿದಂತೆ ಮತ್ತಿತರರು ಇದ್ದರು.ರಂಜಿಸಿದ ಭಜನಾ ನೃತ್ಯ;ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ ೬೧ನೇ ವರ್ಷದ ಗೌರಿಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯಲ್ಲಿ ಕೊಡಗಿನ ಸಿದ್ದಾಪುರದ ನೆಲ್ಲಿಹುದಿಕೇರಿಯ ಶ್ರೀ ಮೂಕಾಂಬಿಕಾ ಭಜನಾ ಕುಣಿತ ಗಮನಸೆಳೆಯಿತು. ಸುಮಾರು ೫೦ ಮಂದಿ ಮಕ್ಕಳ ತಂಡದಿಂದ ದೇವರ ಹಾಡಿಗೆ ಕುಣಿತ ಭಜನೆ ಜನಾಕರ್ಷಣೆಯ ಕೇಂದ್ರವಾಗಿತ್ತು.ಮುಸ್ಲಿಂ ಬಾಂಧವರು ತಂಪು ಪಾನಿಯ ವಿತರಿಸಿ ಶುಭಾಶಯ ಕೋರಿದರು.