ಸುಂಟಿಕೊಪ್ಪ: ಗಣೇಶೋತ್ಸವ ವಿಶೇಷ ಪೂಜೆ ಸಂಪನ್ನ

| Published : Sep 02 2025, 12:00 AM IST

ಸಾರಾಂಶ

ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಗೆ ಮೂರು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಹರದೂರು ಸೇವಾ ಸಮಿತಿ ವತಿಯಿಂದ ಗುಂಡುಗುಟ್ಟಿ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಗೆ 3 ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿಸುವ ಮೂಲಕ ಶುಕ್ರವಾರ ಸಂಜೆ ವಿಸರ್ಜಿಸಲಾಯಿತು. ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ಪೂಜಾ ವಿಧಿ ವಿಧಾನದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆಯೊಂದಿಗೆ ಮೆರವಣಿಗೆ ನಡೆಸಿ ಹರದೂರು ಹೊಳೆಯಲ್ಲಿ ವಿಸರ್ಜಿಸಿದರು. ಆರ್ಚಕರಾದ ನಾರಾಯಣ ಭಟ್ ಅವರು ವಿಶೇಷ ಪೂಜಾ ಕೈಂ ಕರ್ಯಗಳನ್ನು ನೆರವೇರಿಸಿದರು.ಈ ಸಂದರ್ಭ ಹರದೂರು ಸೇವಾ ಸಮಿತಿಯ ಪದಾಧಿಕಾರಿಗಳಾದ ತೇಜಸ್, ವಿಕಾಸ್, ರಘು, ಪೊನ್ನಪ್ಪ, ವಿಜಯ, ರೇವಣ್ಣ ಹಾಗೂ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ನೆರದಿದ್ದರು.